ADVERTISEMENT

ಬೆಳಗಾವಿ ಗಡಿ ಪ್ರವೇಶ: ಶಿವಸೇನಾ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 9:40 IST
Last Updated 23 ಜನವರಿ 2021, 9:40 IST
ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿರುವ ಕನ್ನಡಪರ ಹೋರಾಟಗಾರರು
ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿರುವ ಕನ್ನಡಪರ ಹೋರಾಟಗಾರರು   

ಬೆಳಗಾವಿ: ಮಹಾನಗರ ಪಾಲಿಕೆ ಮುಂಭಾಗದ ಕನ್ನಡ ಧ್ವಜವನ್ನು ತೆರವು ಮಾಡಲು ಗಡಿ ಪ್ರವೇಶಿಸಲು ಮುಂದಾಗಿದ್ದ ಶಿವಸೇನಾ ಕಾರ್ಯಕರ್ತರ ವಿರುದ್ಧ ಕಾಕತಿ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬೆಳಗಾವಿ ಗಡಿ ಪ್ರವೇಶಿಸಿ ಪಾಲಿಕೆಯ ಬಳಿ ಸ್ಥಾಪಿಸಲಾಗಿದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಯತ್ನಿಸಿದ್ದ ಮಹಾರಾಷ್ಟ್ರದ ಶಿವಸೇನಾ ಕೊಲ್ಹಾಪುರ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ದೇವಣೆ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದ ಶಿವಸೇನಾ ಕಾರ್ಯಕರ್ತರನ್ನು ಜ.21ರಂದು ಪೊಲೀಸರು ಶಿನ್ನೊಳ್ಳಿ ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ್ದರು. ಈ ವೇಳೆ ಶಿವಸೇನಾ ಹಾಗೂ ಪೊಲೀಸರ ನಡುವೆ ವಾಗ್ವಾದ, ನೂಕಾಟ-ತಳ್ಳಾಟ ಕೂಡ ನಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.