ADVERTISEMENT

ಬೆಳಗಾವಿ: ಎಂಸಿಒ ಕಚೇರಿಯಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 12 ಮೇ 2020, 14:41 IST
Last Updated 12 ಮೇ 2020, 14:41 IST

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಆವರಣದಲ್ಲಿರುವ ಎಂಸಿಒ (ಮೂವ್‌ಮೆಂಟ್ ಕಂಟ್ರೋಲ್ ಆಫೀಸ್) ಕಚೇರಿಯಲ್ಲಿ ಮಂಗಳವಾರ ಬೆಳಗಿನ ಜಾವ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಭಾರತೀಯ ಸೇನೆ ವತಿಯಿಂದ ಸೈನಿಕರಿಗೆ ನೆರವಾಗುವ ಉದ್ದೇಶದಿಂದ ಈ ಕಚೇರಿ ತೆರೆಯಲಾಗಿದೆ. ‘ಬೆಂಕಿ ಅವಘಡದಿಂದ ಕಚೇರಿಯಲ್ಲಿದ್ದ ಹಲವು ಪೀಠೋಪಕರಣಗಳಿಗೆ ಹಾನಿಯಾಗಿದೆ. ಆದರೆ, ಯಾವುದೇ ಕಡತಗಳು ಸುಟ್ಟಿಲ್ಲ’ ಎಂದು ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸ್ ಠಾಣೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.