
ಕಾಗವಾಡ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆರು ಮಂದಿ ರೈತರಿಗೆ ಸೇರಿದ 20 ಎಕರೆಯಷ್ಟು ಕಬ್ಬು ಸುಟ್ಟಿದ್ದು, ₹25 ಲಕ್ಷದಷ್ಟು ನಷ್ಟವಾಗಿದೆ ಎಂದು ರೈತರು ಅಂದಾಜಿಸಿದ್ದಾರೆ.
ಭರತೇಶ ಖಂಡೇರಾಜುರೆ ಅವರ 5 ಎಕರೆ, ಚಂದ್ರಕಾಂತ ಅಕಿವಾಟೆ, ಧರೆಪ್ಪ ಕುಸನಾಳೆ ಅವರ ತಲಾ 3 ಎಕರೆ, ಮಲ್ಲು ಕುರುಬರ, ಅಣ್ಣು ಕುರಬರ, ಮಹಾದೇವ ಕುರುಬರ ಅವರಿಗೆ ಸೇರಿದ 9 ಎಕರೆ ಬೆಂಕಿಗೆ ಆಹುತಿಯಾಗಿದೆ.
ಉರಿಬಿಸಿಲು ಇದ್ದ ಕಾರಣ, ಕಬ್ಬಿನ ರವದಿ ಒಣಗಿತ್ತು. ಹೊಲದಲ್ಲಿ ನೇತಾಡುವ ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ ಬೆಂಕಿ ಕಿಡಿ ಹೊತ್ತಿಕೊಂಡಿದೆ. ಕಾಗವಾಡದಿಂದ ಅಗ್ನಿ ಶಾಮಕ ದಳದ ವಾಹನ ಬರುವಷ್ಟರಲ್ಲಿ ಕಬ್ಬು ಸುಟ್ಟು ಹೋಯಿತು ಎಂದು ರೈತರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.