ADVERTISEMENT

ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮ- 573 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 10:34 IST
Last Updated 19 ಜುಲೈ 2021, 10:34 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಮೊದಲ ದಿನವಾದ ಸೋಮವಾರ ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ 573 ವಿದ್ಯಾರ್ಥಿಗಳು ಗೈರು ಹಾಜರಾದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 35308 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 35197 ಮಂದಿ ಹಾಜರಾದರು. 111 ವಿದ್ಯಾರ್ಥಿಗಳು ಗೈರು ಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 45049 ವಿದ್ಯಾರ್ಥಿಗಳಲ್ಲಿ 44587 ಮಂದಿ ಹಾಜರಾದರು. 462 ವಿದ್ಯಾರ್ಥಿಗಳು ಗೈರು ಹಾಜರಾದರು. ಇವರಲ್ಲಿ ಬಹುತೇಕರು ಖಾಸಗಿ ವಿದ್ಯಾರ್ಥಿಗಳು ಎಂದು ಡಿಡಿಪಿಐಗಳು ತಿಳಿಸಿದರು.

ADVERTISEMENT

ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಲಾಯಿತು. ಪರೀಕ್ಷಾ ಅಕ್ರಮ ವರದಿಯಾಗಿಲ್ಲ. ಸುಗಮವಾಗಿ ಪರೀಕ್ಷೆ ನಡೆದಿದೆ ಎಂದು ಡಿಡಿಪಿಐಗಳಾದ ಡಾ.ಆನಂದ ಪುಂಡಲೀಕ ಹಾಗೂ ಗಜಾನನ ಮನ್ನಿಕೇರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.