ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಡಿ.10ರಂದು ನಡೆಯಲಿರುವ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿ 5ನೇ ದಿನವಾದ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.
ರಾಮದುರ್ಗ ತಾಲ್ಲೂಕಿನ ಲಖನಾಯಕನಕೊಪ್ಪದ ಸಂಗಮೇಶ ನಾಗಪ್ಪ ಚಿಕ್ಕನರಗುಂದ ಎನ್ನುವವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ನ.23 ಕೊನೆಯ ದಿನವಾಗಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳಿಂದ ಇನ್ನೂ ಉಮೇದುವಾರಿಕೆ ಸಲ್ಲಿಕೆಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.