ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಿಂದ ಡಿ.21ರಿಂದ ಸೂರತ್‌ಗೆ ವಿಮಾನ ಹಾರಾಟ ಆರಂಭವಾಗಲಿದೆ.
‘‘ಉಡಾನ್’ ಯೋಜನೆಯಲ್ಲಿ ‘ಸ್ಟಾರ್ ಏರ್’ ಕಂಪನಿಯು ವಿಮಾನವು ವಾರದಲ್ಲಿ ಮೂರು ದಿನ ಅಂದರೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಕಾರ್ಯಾಚರಣೆ ನಡೆಸಲಿದೆ. ಬೆಳಗಾವಿಯಿಂದ ಮಧ್ಯಾಹ್ನ 12ಕ್ಕೆ ಹೊರಟು ಮಧ್ಯಾಹ್ನ 1.20ಕ್ಕೆ ಸೂರತ್ ತಲುಪಲಿದೆ. ಅಲ್ಲಿಂದ ಸಂಜೆ 5.30ಕ್ಕೆ ನಿರ್ಗಮಿಸಿ, ಸಂಜೆ 6.50ಕ್ಕೆ ಸಾಂಬ್ರಾಗೆ ಬಂದಿಳಿಯಲಿದೆ. ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ’ ಎಂದು ವಿಮಾನನಿಲ್ದಾಣದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.