ADVERTISEMENT

ನೆರೆ ಹಾನಿ: ಕೇಂದ್ರ ತಂಡದಿಂದ ಪರಿಶೀಲನೆ ಆರಂಭ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2019, 12:39 IST
Last Updated 25 ಆಗಸ್ಟ್ 2019, 12:39 IST
   

ಬೆಳಗಾವಿ: ಕೇಂದ್ರ ಅಧಿಕಾರಿಗಳ ತಂಡ, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಪರಿಶೀಲನೆ ಆರಂಭಿಸಿದೆ.

ಚಿಕ್ಕೋಡಿ ತಾಲ್ಲೂಕಿನ ಅಂಕಲಿ- ಮಾಂಜರಿ ಸೇತುವೆ ಸುತ್ತಮುತ್ತ ನೆರೆಯಿಂದಾಗಿ ನೂರಾರು ಎಕರೆ ಕಬ್ಬಿನ ಬೆಳೆ ಸಂಪೂರ್ಣ ಹಾನಿಯಾಗಿರುವುದನ್ನು ಅಧಿಕಾರಿಗಳು ವೀಕ್ಷಿಸಿದರು.

ಕೃಷ್ಣಾ ನದಿ ಪ್ರವಾಹದಿಂದಾಗಿ ರೈತರು ತತ್ತರಿಸಿ ಹೋಗಿದ್ದಾರೆ. ಬಹಳಷ್ಟು ಬೆಳೆ ಹಾನಿಯಾಗಿದೆ. ಸಾವಿರಾರು ಮನೆಗಳು ಕುಸಿದಿವೆ. ಮೂರು ತಿಂಗಳ ಹಿಂದೆ ಇಲ್ಲಿ ಹನಿ ನೀರೂ ಇರಲಿಲ್ಲ. ಆಗ ಬೆಳೆ ನಷ್ಟವಾಗಿತ್ತು. ಈಗ ವೈರುಧ್ಯ ಸ್ಥಿತಿ ನಿರ್ಮಾಣವಾಗಿದೆ‌. ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಭಾಗದ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ವಿತರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು.

ADVERTISEMENT

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಕಾಶ್ ನೇತೃತ್ವದ ಅಧಿಕಾರಿಗಳ ತಂಡ ಪರಿಶೀಲನೆ ಆರಂಭಿಸಿದೆ. ಅವರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಡಾ ಎಸ್.ಬಿ. ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯ್ತಿ ಡಾ.ಕೆ.ವಿ. ರಾಜೇಂದ್ರ ವಾಸ್ತವ ಪರಿಸ್ಥಿತಿಯನ್ನು ತೋರಿಸಿದರು.

ಇದಕ್ಕೂ ಮುನ್ನ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಅಧಿಕಾರಿಗಳು, ಜಿಲ್ಲೆಯಲ್ಲಿ ಆಗಿರುವ ಹಾನಿಯ ವರದಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.