ಬೆಳಗಾವಿ: ಇಲ್ಲಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಬೆಳಿಗ್ಗೆ ‘ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ’ ಆಚರಿಸಲಾಯಿತು.
ಅರಣ್ಯ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ನೀಡಿದ ಬಲಿದಾನ ಸ್ಮರಿಸಲಾಯಿತು.
ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಠೋರ್,
ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಎನ್.ಇನವಳ್ಳಿ, ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಪುಷ್ಪಗುಚ್ಛ ಅರ್ಪಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ಬಳಿಕ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮರಿಗೆ ಗೌರವ ಸಮರ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.