ಬೈಲಹೊಂಗಲ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ವತಿಯಿಂದ ತಾಲ್ಲೂಕಿನ ಎಲ್ಲ ಪಶು ಚಿಕಿತ್ಸಾಲಯಗಳಲ್ಲಿ ಉಚಿತ ಮೇವು ಮತ್ತು ಬೀಜ ವಿತರಣೆ ಜುಲೈ 18 ರಿಂದ ಆರಂಭಗೊಳ್ಳಲಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಪಶುಪಾಲನೆ ಮುಖ್ಯ ಪಶು ವೈದ್ಯಾಧಿಕಾರಿ ಶ್ರೀಕಾಂತ ಗಾಂವಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಒಬ್ಬ ರೈತನಿಗೆ 5 ಕೆಜಿ ಸೊರಗಂ(ಜೋಳ) ಒಂದು ಮೇವು ಬೀಜ ಕಿರು ಪೊಟ್ಟಣ ನೀಡಲಾಗುವುದು. ಆಸಕ್ತ ರೈತರು ಎಫ್‌ಐಡಿ ಸಂಖ್ಯೆ, ಜಮೀನಿನ ಸರ್ವೆ ಸಂಖ್ಯೆ, ಮೊಬೈಲ್ ಫೋನ್ ಮಾಲೀಕತ್ವದ ಸಂಖ್ಯೆ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರಾಗಿದ್ದರೆ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ವ್ಯಾಪ್ತಿಗೆ ಸಮೀಪ ಇರುವ ಪಶು ಚಿಕಿತ್ಸಾಲಯಕ್ಕೆ ಭೇಟಿ ನೀಡಿ ಉಚಿತವಾಗಿ ಮೇವಿನ ಬೀಜಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪಶು ಇಲಾಖೆ ಸಂಪರ್ಕಿಸುವಂತೆ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.