ADVERTISEMENT

ಅಥಣಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕ್ಲಾಸ್

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 14:50 IST
Last Updated 29 ಏಪ್ರಿಲ್ 2020, 14:50 IST
ಅಥಣಿಯಲ್ಲಿ ಹಮ್ಮಿಕೊಂಡಿರುವ ಉಚಿತ ಆನ್‌ಲೈನ್‌ ತರಬೇತಿಯ ದೃಶ್ಯ
ಅಥಣಿಯಲ್ಲಿ ಹಮ್ಮಿಕೊಂಡಿರುವ ಉಚಿತ ಆನ್‌ಲೈನ್‌ ತರಬೇತಿಯ ದೃಶ್ಯ   

ಅಥಣಿ: ‘ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ಭವಿಷ್ಯವನ್ನು ಉತ್ತಮವಾಗಿ ರೂಪಿಸುವಂತಹ ಸಮಯವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕಾಡಸಿದ್ದೇಶ್ವರ ಆಶ್ರಮದ ಕಾಡಯ್ಯ ಸ್ವಾಮೀಜಿ ಸಲಹೆ ನೀಡಿದರು.

ಇಲ್ಲಿನ ಹುದ್ದಾರ ಶಿಕ್ಷಣ ಸಂಸ್ಥೆ ಹಾಗೂ ಕೊಕಟನೂರದ ಕಲ್ಪವೃಕ್ಷ ಶಿಕ್ಷಣ ಸಂಸ್ಥೆ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹಮ್ಮಿಕೊಂಡಿರುವ ಆನ್‌ಲೈನ್ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಕೊರೊನಾ ವೈರಾಣು ಹರಡುವ ಭೀತಿಯಿಂದಾಗಿ ಲಾಕ್‌ಡೌನ್‌ ಘೋಷಿಸಲಾಗಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಉಚಿತವಾಗಿ ಆನ್‌ಲೈನ್‌ ತರಬೇತಿ ನೀಡುತ್ತಿರುವುದು ಒಳ್ಳೆಯದು’ ಎಂದರು.

ADVERTISEMENT

ಹುದ್ದಾರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯ ಹುದಾರ, ‘ನಾವು ಉಚಿತವಾಗಿ ತರಬೇತಿ ನೀಡುತ್ತಿದ್ದೇವೆ. ರಾಜ್ಯದ ಯಾವುದೇ ವಿದ್ಯಾರ್ಥಿ ಬೇಕಾದರೂ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ: 9902995519 ಸಂಪರ್ಕಿಸಬಹುದು’ ಎಂದು ತಿಳಿಸಿದರು.

ಅನಂತರಾವ ಜೋಶಿ, ಸಂಜಯ ಕುಲಕರ್ಣಿ, ಆರ್.ಪಿ. ಹೊನಗೌಡರ, ಶಿವಾನಂದ ಕಾಂಬಳೆ, ಪೂರ್ಣಿಮಾ ಹುದ್ದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.