ADVERTISEMENT

ಅಮ್ಮಾ ಫೌಂಡೇಶನ್‌ನಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 14:17 IST
Last Updated 10 ಜೂನ್ 2025, 14:17 IST
   

ರಾಯಬಾಗ: ಅಮ್ಮಾ ಫೌಂಡೇಶನ್ ರಾಯಬಾಗ ಹಾಗೂ ಇನ್ಫೊಸಿಸ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಸೋಮವಾರ ತಾಲ್ಲೂಕಿನ ವಿವಿಧ ಗ್ರಾಮಗಳ ಹತ್ತು ಜನ ಎಚ್‌ಐವಿ ಪೀಡಿತ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿಯಾಗಿ ಜೀವನ ಸಾಗಿಸಲು ಉಚಿತ ಹೊಲಿಗೆ ಯಂತ್ರ ವಿತರಿಸಲಾಯಿತು.

ಅಲ್ಲದೇ ಈ ಮಹಿಳೆಯರ ಮಕ್ಕಳಿಗೆ ಉಚಿತ ಶಾಲಾ ಕಿಟ್‌ಗಳನ್ನು ವಿತರಿಸಲಾಯಿತು.

ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಅಮ್ಮಾ ಫೌಂಡೇಶನ್ ಕಾರ್ಯದರ್ಶಿ ಶೋಭಾ ಗಸ್ತಿ ಮಾತನಾಡಿ, ಸಾಮಾಜಿಕವಾಗಿ ತುಳಿತಕ್ಕೊಳಗಾದ ಹಾಗೂ ಅವಕಾಶಗಳಿಂದ ವಂಚಿತರಾಗಿರುವ ಮಹಿಳೆಯರಿಗೆ ಸ್ವಯಂ ಉದ್ಯೋಗ ಮಾಡುವುದಕ್ಕೆ ಇಂಥಹ ಯೋಜನೆಗಳು ನೆರವಾಗುತ್ತವೆ. ನಾವು ಅರ್ಹ ಫಲಾನುಭವಿಗಳನ್ನು ಗುರುತಿಸಿ ಅನುಕೂಲ ಮಾಡಿಕೊಡುತ್ತಿದ್ದೇವೆ.ಮಹಿಳೆಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.ಕಾರ್ಯಕ್ರಮದ ಸಂಯೋಜಕ ರಾಜು ಗಸ್ತಿ ಹಾಗೂ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.