ADVERTISEMENT

ಬೆಳಗಾವಿ: ‘ಮಹಿಳಾ ಸುರಕ್ಷತೆ ಆದ್ಯತೆಯಾಗಲಿ’

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 15:39 IST
Last Updated 1 ಅಕ್ಟೋಬರ್ 2021, 15:39 IST

ಬೆಳಗಾವಿ: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಸ್ಮಾರ್ಟ್ ಸಿಟಿ ಕಂಪನಿಯು ‘ಮಹಿಳಾ ಸುರಕ್ಷತೆ ಹಾಗೂ ಸಬಲೀಕರಣ’ ಧ್ಯೇಯದೊಂದಿಗೆ ಶುಕ್ರವಾರ ‘ಫ್ರೀಡಂ ಟು ವಾಕ್’ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಉದ್ಘಾಟಿಸಿದ ಸಂಸದೆ ಮಂಗಲಾ ಅಂಗಡಿ, ‘ಮಹಿಳೆಯರ ಸುರಕ್ಷತೆ ನಮ್ಮೆಲ್ಲರ ಆದ್ಯತೆಯಾಗಬೇಕು’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ ಅವರು ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಅಳವಡಿಸಿರುವ ಸ್ಮಾರ್ಟ್‌ ಕಂಬದಲ್ಲಿ ‘ಪ್ಯಾನಿಕ್ ಬಟನ್’ ಒತ್ತಿ ಪೊಲೀಸ್‌ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿದರು.

ADVERTISEMENT

ರಾಣಿ ಚನ್ನಮ್ಮ ವೃತ್ತದವರೆಗೆ ಜಾಥಾ ನಡೆಯಿತು.

ಸ್ಮಾರ್ಟ್‌ ಸಿಟಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.