ADVERTISEMENT

ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 14:04 IST
Last Updated 11 ಜನವರಿ 2021, 14:04 IST
ಬೆಳಗಾವಿಯ ಉತ್ತರ ಮತ ಕ್ಷೇತ್ರದ ಶಾಹೂನಗರದ ಶಿವಾಲಯದಲ್ಲಿ ವಿಶ್ವ ಹಿಂದೂ ಪರಿಷತ್‌ನಿಂದ ಸೋಮವಾರ ಹಮ್ಮಿಕೊಂಡಿದ್ದ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಚಾಲನೆ ನೀಡಿದರು
ಬೆಳಗಾವಿಯ ಉತ್ತರ ಮತ ಕ್ಷೇತ್ರದ ಶಾಹೂನಗರದ ಶಿವಾಲಯದಲ್ಲಿ ವಿಶ್ವ ಹಿಂದೂ ಪರಿಷತ್‌ನಿಂದ ಸೋಮವಾರ ಹಮ್ಮಿಕೊಂಡಿದ್ದ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಚಾಲನೆ ನೀಡಿದರು   

ಬೆಳಗಾವಿ: ಉತ್ತರ ಮತ ಕ್ಷೇತ್ರದ ಶಾಹೂನಗರದ ಶಿವಾಲಯದಲ್ಲಿ ವಿಶ್ವ ಹಿಂದೂ ಪರಿಷತ್‌ನಿಂದ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಶಾಸಕ ಅನಿಲ ಬೆನಕೆ ಹಾಗೂ ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ, ಅಭಿಯಾನದ ರಸೀದಿ ಹಾಗೂ ಕರಪತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಬೆನಕೆ, ‘ಹಿಂದೂಗಳ ಪವಿತ್ರ ಸ್ಥಳವಾದ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದು ಎಲ್ಲ ಭಾರತೀಯರಿಗೆ ಹೆಮ್ಮೆಯ ಸಂಗತಿಯಾಗಿದೆ. ಭವ್ಯ ಮಂದಿರ ನಿರ್ಮಾಣಕ್ಕೆ ಎಲ್ಲರೂ ನಿಧಿ ಸಮರ್ಪಿಸಬೇಕು. ಮೊದಲ ರಸೀದಿಯಲ್ಲಿ ₹ 5 ಲಕ್ಷ ದೇಣಿಗೆ ಜಮೆ ಮಾಡಲಾಗಿದೆ. ಪ್ರತಿಯೊಬ್ಬರೂ ಕೈಜೋಡಿಸಿ ಅಭಿಯಾನ ಯಶಸ್ವಿಗೊಳಿಸಬೇಕು’ ಎಂದರು.

ADVERTISEMENT

ಮುಖಂಡರಾದ ಪರಮೇಶ್ವರ ಹೆಗಡೆ, ಕೃಷ್ಣ ಭಟ್, ಶ್ರೀಕಾಂತ ಕದಮ್, ಅಶೋಕ ಶಿಂತ್ರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.