ADVERTISEMENT

ಬಾಳಾಸಾಹೇಬಗೆ ಗಳಗನಾಥ ಸಾಹಿತ್ಯ, ಹನುಮಾಕ್ಷಿಗೆ ರಾಜಪುರೋಹಿತ ಸಂಶೋಧಕ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 7:24 IST
Last Updated 4 ಜನವರಿ 2021, 7:24 IST
ಡಾ.ಬಾಳಾಸಾಹೇಬ ಲೋಕಾಪುರ
ಡಾ.ಬಾಳಾಸಾಹೇಬ ಲೋಕಾಪುರ   

ಬೆಳಗಾವಿ: ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ. ರಾಜಪುರೋಹಿತ ಪ್ರತಿಷ್ಠಾನದಿಂದ ನೀಡುವ 2019ನೇ ಸಾಲಿನ ‘ಗಳಗನಾಥ ಸಾಹಿತ್ಯ’ ಪ್ರಶಸ್ತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಾಳಾಸಾಹೇಬ ಲೋಕಾಪುರ ಹಾಗೂ ನಾ.ಶ್ರೀ. ರಾಜಪುರೋಹಿತ ಸಂಶೋಧಕ ಪ್ರಶಸ್ತಿಗೆ ಡಾ.ಹನುಮಾಕ್ಷಿ ಗೋಗಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹ 50ಸಾವಿರ ಹಾಗೂ ಸ್ಮರಣಿಕೆ ಒಳಗೊಂಡಿದೆ.

‘ಇಲ್ಲಿನ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ಜ.5ರಂದು ಬೆಳಿಗ್ಗೆ 11ಕ್ಕೆ ನಡೆಯುವ ಸಮಾರಂಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಪ್ರದಾನ ಮಾಡುವರು. ‘ರಂಗ ಸಂಪದ’ದ ಅಧ್ಯಕ್ಷ ಡಾ.ಅರವಿಂದ ವಿ. ಕುಲಕರ್ಣಿ ಉದ್ಘಾಟಿಸುವರು. ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾ.ವೆಂಕಟಗಿರಿ ದಳವಾಯಿ ಮತ್ತು ನಿವೃತ್ತ ಪ್ರಾಚಾರ್ಯೆ ಡಾ.ಸ್ಮಿತಾ ಸುರೇಬಾನಕರ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡುವರು. ಸಾಹಿತಿ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು’ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ದುಶ್ಯಂತ ನಾಡಗೌಡ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.