ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಜನಸಾಗರವೇ ಹರಿದುಬಂದಿದೆ.
ಬೆಳಗಾವಿ: ಇಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಶನಿವಾರ ರಾತ್ರಿ ಜನಸಾಗರವೇ ಹರಿದುಬರುತ್ತಿದೆ.
ಧರ್ಮವೀರ ಸಂಭಾಜಿ ವೃತ್ತ ಜನರಿಂದ ಕಿಕ್ಕಿರಿದು ತುಂಬಿದೆ. ಗಣೇಶನ ಭಕ್ತಿಗೀತೆಗಳಿಗೆ ಯುವ ಮನಸ್ಸುಗಳು ಕುಣಿದು ಕುಪ್ಪಳಿಸುತ್ತಿವೆ.
ಜಿಲ್ಲಾಡಳಿತ, ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟು ಮೆರವಣಿಗೆ ಸುಗಮವಾಗಿ ಸಾಗುವಂತೆ ನೋಡಿಕೊಳ್ಳುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಸೇರಿರುವ ಜನಸಾಗರ
ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಸೇರಿರುವ ಜನಸಮೂಹ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.