ಅಥಣಿ: ಪಟ್ಟಣದಲ್ಲಿ ಗಾಂಜಾ ಮಾರಾಟದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
‘ಮಟನ್ ಮಾರ್ಕೆಟ್‌ನ ನಜೀರ ದ್ರಾಕ್ಷಿ ಹಾಗೂ ಚರ್ಮಾಲಯ ರಸ್ತೆಯ ಭೀಮಸೇನ ಯಳಮಲ್ಲೆ ಬಂಧಿತರು. ಅವರಿಂದ ₹ 10,520 ಮೌಲ್ಯದ 526 ಗ್ರಾಂ. ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಎಸ್‌ಐ ಕುಮಾರ ಹಾಡಕರ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.