ಬಂಧನ
(ಪ್ರಾತಿನಿಧಿಕ ಚಿತ್ರ)
ರಾಯಬಾಗ: ಹೊಲದಲ್ಲಿ ಕಬ್ಬಿನ ಬೆಳೆ ಮಧ್ಯೆ ಅನಧಿಕೃತವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ.
ತಾಲ್ಲೂಕಿನ ನಿಡಗುಂದಿ ಗ್ರಾಮದ ಶಿಂಗಾಡಿ ಮಾಳಪ್ಪ ಹಿರೇಕೊಡಿ(45) ಬಂಧಿತ ಆರೋಪಿ.
ಆರೋಪಿಯು ಕಬ್ಬಿನ ಬೆಳೆ ಮಧ್ಯೆ ಬೆಳೆದ 205 ಗಾಂಜಾ ಗಿಡಗಳು,ಎಲೆ, ಹೂವು,ಕಾಯಿ, ಕಾಂಡ ಸೇರಿದಂತೆ ₹22 ಲಕ್ಷ ಮೌಲ್ಯದ 441 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ, ಬೆಳಗಾವಿ ಹೆಚ್ಚುವರಿ ಎಸ್‌ಪಿ ಆರ್.ಬಿ.ಬಸರಗಿ, ಅಥಣಿ ಡಿಎಸ್ಪಿ ಪ್ರಶಾಂತ ಮುನ್ನೋಳ್ಳಿಯವರ ಮಾರ್ಗದರ್ಶನದಲ್ಲಿ ರಾಯಬಾಗ ಪೊಲೀಸ್ ಠಾಣೆ ಸಿಪಿಐ ಬಿ.ಎಸ್.ಮಂಟೂರ, ಪಿಎಸ್‌ಐ ನರಸಿಂಹರಾಜು ಜೆ.ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.