ADVERTISEMENT

ಇಬ್ಬರ ಬಂಧನ; 64 ಕೆ.ಜಿ. ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 6:04 IST
Last Updated 20 ಸೆಪ್ಟೆಂಬರ್ 2019, 6:04 IST
ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ರಾಯಬಾಗ ತಾಲ್ಲೂಕಿನ ನಿಪನಾಳ ಗ್ರಾಮದಲ್ಲಿ ಗಾಂಜಾ ಸಸಿಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸಿದ್ದಾರೆ
ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ರಾಯಬಾಗ ತಾಲ್ಲೂಕಿನ ನಿಪನಾಳ ಗ್ರಾಮದಲ್ಲಿ ಗಾಂಜಾ ಸಸಿಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸಿದ್ದಾರೆ   

ಬೆಳಗಾವಿ: ರಾಯಬಾಗ ತಾಲ್ಲೂಕಿನ ನಿಪನಾಳ ಗ್ರಾಮದ ಎರಡು ಕಡೆಗಳಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಇಬ್ಬರನ್ನು ಜಿಲ್ಲಾ ಸಿಇಎನ್‌ ಠಾಣೆ ಪೊಲೀಸರು ಬಂಧಿಸಿ, ಅವರಿಂದ ₹ 1.29 ಲಕ್ಷ ಮೌಲ್ಯದ 64 ಕೆ.ಜಿ. 600 ಗ್ರಾಂ. ಗಾಂಜಾ ಸಸಿಗಳನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀಕಾಂತ ಪಂಡಿತ ಪವಾರ ಹಾಗೂ ಪರಸಪ್ಪ ಯಲ್ಲಪ್ಪ ಹಳಬರ ಬಂಧಿತ ಆರೋಪಿಗಳು. ಮುಸುಕಿನ ಜೋಳ ಬೆಳೆಯ ಜೊತೆ ಗಾಂಜಾ ಗಿಡಗಳನ್ನು ಬೆಳೆಯುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಎಸ್ಪಿ, ಎಎಸ್ಪಿ ಮಾರ್ಗದರ್ಶನದಲ್ಲಿ ಸಿಇಎನ್ ಠಾಣೆ ಇನ್‌ಸ್ಪೆಕ್ಟರ್ ವೀರೇಶ ದೊಡ್ಡಮನಿ, ಪಿಎಸ್‌ಐ ಚಾಮುಂಡೇಶ್ವರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.