ADVERTISEMENT

ರಾಯಬಾಗ: ಗಾಂಜಾ ಸಂಗ್ರಹ, ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 13:59 IST
Last Updated 28 ಅಕ್ಟೋಬರ್ 2020, 13:59 IST
ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಅಕ್ರಮವಾಗಿ ಗಂಜಾ ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಅಬಕಾರಿ ಪೊಲೀಸರು ಬುಧವಾರ ಬಂಧಿಸಿದ್ದಾರೆ
ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಅಕ್ರಮವಾಗಿ ಗಂಜಾ ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಅಬಕಾರಿ ಪೊಲೀಸರು ಬುಧವಾರ ಬಂಧಿಸಿದ್ದಾರೆ   

ರಾಯಬಾಗ: ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಹೊಲದಲ್ಲಿ ಬೆಳೆದಿದ್ದ ಹಾಗೂ ಮನೆಯಲ್ಲಿ ಸಂಗ್ರಹಿಸಿದ್ದ ಗಾಂಜಾವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡು, ವ್ಯಕ್ತಿಯನ್ನು ಬಂಧಿಸಿದ್ದಾರೆ.

ಅದೇ ಗ್ರಾಮದ ಈರಪ್ಪ ಬಸಪ್ಪ ಖನದಾಳೆ ಬಂಧಿತ ಆರೋಪಿ. ಅವರಿಂದ 590 ಗ್ರಾಂ. ಹಸಿ ಗಾಂಜಾ ಹಾಗೂ 740 ಗ್ರಾಂ. ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಬಕಾರಿ ಉಪ ಆಯುಕ್ತ ಕೆ.ಅರುಣಕುಮಾರ ಅವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಸೂಪರಿಂಟೆಂಡೆಂಟ್ ಲಗಮಣ್ಣ ಸಲಗರೆ ಅವರ ನೇತೃತ್ವದಲ್ಲಿ ರಾಯಬಾಗ ವಲಯದ ಉಪ ಅಬಕಾರಿ ಇನ್‌ಸ್ಪೆಕ್ಟರ್‌ ಜಟ್ಟೆಪ್ಪ ಮುಳಬಾಗಿ, ಪಿಎಸ್‌ಐ ವಿಜಯಕುಮಾರ ಮೆಳವಂಕಿ, ಹಣಮಂತಪ್ಪ ಪಟಾಯಿತ ಈ ಕಾರ್ಯಾಚರಣೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.