ADVERTISEMENT

ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ: ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 2:26 IST
Last Updated 6 ಅಕ್ಟೋಬರ್ 2025, 2:26 IST
ಗೋಕಾಕ ಸಮೀಪದ ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಶನಿವಾರ ಅಧ್ಯಕ್ಷರಾಗಿ ಆಯ್ಕೆಗೊಂಡ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಆಡಳಿತ ಮಂಡಳದಿಂದ ಅಭಿನಂದಿಸಲಾಯಿತು
ಗೋಕಾಕ ಸಮೀಪದ ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಶನಿವಾರ ಅಧ್ಯಕ್ಷರಾಗಿ ಆಯ್ಕೆಗೊಂಡ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಆಡಳಿತ ಮಂಡಳದಿಂದ ಅಭಿನಂದಿಸಲಾಯಿತು   

ಗೋಕಾಕ: ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಪ್ರಕಟಿಸಿದರು.

ಕಾರ್ಖಾನೆಯ ಅಧ್ಯಕ್ಷರಾಗಿದ್ದ ಅಶೋಕ ಪಾಟೀಲ ಮತ್ತು ಉಪಾಧ್ಯಕ್ಷರಾಗಿದ್ದ ರಾಮಣ್ಣಾ ಮಹಾರೆಡ್ಡಿ ಅವರ ಅಕಾಲಿಕ ನಿಧನದಿಂದ ಉಭಯ ಸ್ಥಾನಗಳು ತೆರವಾಗಿದ್ದರಿಂದ ಆ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ADVERTISEMENT

ಅಧ್ಯಕ್ಷ– ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಂಬಳಿ ಮತ್ತು ಕಬ್ಬೂರ ಅವರ ಅಧಿಕಾರವಧಿಯು 2028ರ ವರೆಗೆ ಇರಲಿದೆ. ಕಾರ್ಖಾನೆಯ ಆಡಳಿತ ಮಂಡಳಿಯ ಸದಸ್ಯರು ಕಂಬಳಿ ಮತ್ತು ಕಬ್ಬೂರ ಅವರನ್ನು ಅಭಿನಂದಿಸಿದರು.

ಶಾಸಕರಿಗೆ ಗೌರವ ಸಮರ್ಪಣೆ: ಕಾರ್ಖಾನೆ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಗೊಳ್ಳುತ್ತಲೇ ಕಾರ್ಖಾನೆಯ ಹಿತೈಷಿ ಮತ್ತು ಬೆಮುಲ್‌ ಚೇರಮನ್ನರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ, ಸತ್ಕರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ‘ರೈತರು ಉತ್ತಮ ಇಳುವರಿಯ ಕಬ್ಬನ್ನು ಕಾರ್ಖಾನೆಗೆ ಪೂರೈಕೆ ಮಾಡಿ, ಪ್ರಗತಿಗೆ ಕೈ ಜೋಡಿಸಬೇಕು.‌ ಹೊಸ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ರೈತರ ಹಿತಕ್ಕನುಗುಣವಾಗಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.

ನಿರ್ದೇಶಕರಾದ ಗಿರೀಶ ಹಳ್ಳೂರ, ಭೂತಪ್ಪ ಗೊಡೇರ, ಮಹಾದೇವಪ್ಪ ಭೋವಿ, ಮಾಳಪ್ಪ ಜಾಗನೂರ, ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗಪ್ಪ ಪೂಜೇರಿ, ಜಗದೀಶ ಬಂಡ್ರೋಳಿ, ವಿನೀತ ಪಾಟೀಲ, ಅರುಣ ಮಹಾರೆಡ್ಡಿ, ಶಿವನಗೌಡ ಪಾಟೀಲ (ಶಿವಾಪೂರ), ಅರೀಫ ಪೀರಜಾದೆ, ಯಲ್ಲವ್ವ ಸಾರಾಪೂರ, ಲಕ್ಕವ್ವ ಬೆಳಗಲಿ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಕಚೇರಿಯ ಅಧೀಕ್ಷಕ ಈರಣ್ಣ ಜಂಬಗಿಯವರು ಇದ್ದರು.

ಚಿತ್ರ: 05ಜಿಕೆಕೆ2 ಗೋಕಾಕದಲ್ಲಿ ಶನಿವಾರ ಎನ್.ಎಸ್.ಎಫ್. ಆವರಣದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಅವಿರೋಧ ಆಯ್ಕೆಗೊಂಡ ನೂತನ ಅಧ್ಯಕ್ಷ ಶಿದ್ಲಿಂಗಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಕಬ್ಬೂರ ಅವರು ಕಾರ್ಖಾನೆ ಹಿತೈಷಿ ಬೆಮೂಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ತಮ್ಮ ಆಯ್ಕೆಗೆ ಶ್ರಮಿಸಿದ್ದಕ್ಕೆ ಅಭಿನಂದಿಸಿದರು. ಚಿತ್ರದಲ್ಲಿ ಸಿ.ಎ. ಸೈದಪ್ಪ ಗದಾಡಿ ಆಡಳಿತ ಮಂಡಳಿ ನಿರ್ದೇಶಕರು ಇದ್ದಾರೆ.
ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮನ್ನು ನವೆಂಬರ್ ಮೊದಲ ವಾರದಲ್ಲಿ ಆರಂಭಿಸಲಾಗುವುದು. ಪ್ರಸಕ್ತ ಹಂಗಾಮಿನಲ್ಲಿ 3ರಿಂದ 5 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ
ಬಾಲಚಂದ್ರ ಜಾರಕಿಹೊಳಿ ಬೆಮುಲ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.