ADVERTISEMENT

ಕೆಎಲ್‌ಇ ಆಸ್ಪತ್ರೆ: ಅತ್ಯಾಧುನಿಕ ಪ್ರಯೋಗಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2021, 15:39 IST
Last Updated 20 ಆಗಸ್ಟ್ 2021, 15:39 IST
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಅತ್ಯಾಧುನಿಕ ಪ್ರಯೋಗಾಲಯವನ್ನು  ಹೈದರಾಬಾದ್‌ನ ಏಷ್ಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಎಂಟ್ರಾಲಾಜಿ ಆಸ್ಪತ್ರೆಯ ಕಾರ್ಯಾಧ್ಯಕ್ಷ ಡಾ.ಡಿ. ನಾಗೇಶ್ವರ ರೆಡ್ಡಿ ಉದ್ಘಾಟಿಸಿದರು. ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಇದ್ದಾರೆ
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಅತ್ಯಾಧುನಿಕ ಪ್ರಯೋಗಾಲಯವನ್ನು  ಹೈದರಾಬಾದ್‌ನ ಏಷ್ಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಎಂಟ್ರಾಲಾಜಿ ಆಸ್ಪತ್ರೆಯ ಕಾರ್ಯಾಧ್ಯಕ್ಷ ಡಾ.ಡಿ. ನಾಗೇಶ್ವರ ರೆಡ್ಡಿ ಉದ್ಘಾಟಿಸಿದರು. ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಇದ್ದಾರೆ   

ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಿಸಿರುವ ‘ಜಿಐ–ಫಿಸಿಯಾಲಜಿ ಅತ್ಯಾಧುನಿಕ ಪ್ರಯೋಗಾಲಯ’ ಹಾಗೂ ‘ಡೈಜಿಸ್ಟಿವ್ ವಿಜ್ಞಾನ ವಿಭಾಗ’ವನ್ನು ಹೈದರಾಬಾದ್‌ನ ಏಷ್ಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಎಂಟ್ರಾಲಾಜಿ ಆಸ್ಪತ್ರೆಯ ಕಾರ್ಯಾಧ್ಯಕ್ಷ ಡಾ.ಡಿ. ನಾಗೇಶ್ವರ ರೆಡ್ಡಿ ಉದ್ಘಾಟಿಸಿದರು.

ನಂತರ ‘ಎಂಡೋಸ್ಕೋಪಿಯಲ್ಲಿ ಇತ್ತೀಚಿನ ಬೆಳವಣಿಗೆಗಳು’ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಅವರು, ‘ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕೌಶಲ ಹಾಗೂ ತಂತ್ರಜ್ಞಾನ ಅತ್ಯಂತ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದೆ. 2025ರ ನಂತರ ಮಧುಮೇಹದಿಂದ ಹಿಡಿದು ಬೆರಿಯಾಟ್ರಿಕ್ ಶಸ್ತ್ರಚಿಕಿತ್ಸೆವರೆಗೆ ಎಂಡೋಸ್ಕೋಪಿ ಕಾರ್ಯಸಾಧ್ಯವಾಗಲಿದೆ. ವಿಜ್ಞಾನದಲ್ಲಿ ಆಗುವ ಬದಲಾವಣೆಗಳಿಂದ ಸಮಾಜವನ್ನು ಆರೋಗ್ಯಯುತ ಮಾಡಲು ಸಾಕಷ್ಟು ಅವಕಾಶಗಳಿವೆ. ಅದನ್ನುಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ವೈದ್ಯರು ಸಮಾಜದ ಆರೋಗ್ಯ ಕಾಪಾಡಲು ಸಿದ್ಧವಾಗಿರಬೇಕು. ತಂಡವಾಗಿ ಈ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಬಹುದು’ ಎಂದರು.

ADVERTISEMENT

ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಸತ್ಕರಿಸಿದರು. ಆಡಳಿತ ಮಂಡಳಿ ಸದಸ್ಯರಾದ ಎಸ್.ಸಿ. ಮೆಟಗುಡ್, ಅಮರ(ಪ್ರವೀಣ) ಬಾಗೇವಾಡಿ, ಬಸವರಾಜ ತಟವಾಟಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೋಜಿ, ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಡಾ.ಆರ್.ಬಿ. ನೇರ್ಲಿ, ಉಪ ಪ್ರಾಚಾರ್ಯ ಡಾ.ವಿ.ಎಂ. ಪಟ್ಟಣಶೆಟ್ಟಿ, ಡಾ.ಎಚ್.ಬಿ. ರಾಜಶೇಖರ, ಡಾ.ಸಂತೋಷ ಹಜಾರೆ, ಡಾ.ವರದರಾಜ ಗೋಕಾಕ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.