ADVERTISEMENT

ಮನೆ ಬಾಡಿಗೆ, ಸಾಲ ಮರುಪಾವತಿಗೆ ಕಾಲಾವಕಾಶ: ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಮೇ 2020, 14:17 IST
Last Updated 26 ಮೇ 2020, 14:17 IST

ಬೆಳಗಾವಿ: ‘ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೂಲಿ ಕಾರ್ಮಿಕರು ಹಾಗೂ ಇತರ ಬಡ ವರ್ಗದ ಜನರಿಗೆ ಮನೆ ಬಾಡಿಗೆ ನೀಡುವಂತೆ ಮನೆ ಮಾಲೀಕರು ಒತ್ತಾಯಿಸಬಾರದು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

‘ಲಾಕ್‌ಡೌನ್ ಕಾರಣಕ್ಕೆ ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಇಂತಹ ಕುಟುಂಬಗಳಿಗೆ ಮನೆ ಬಾಡಿಗೆ ಪಾವತಿಸಲು ಮೂರು ತಿಂಗಳು ಕಾಲಾವಕಾಶ ನೀಡಬೇಕು. ಕಾಲಾವಕಾಶ ನೀಡದೆ ಮನೆ ಬಾಡಿಗೆಗೆ ಒತ್ತಡ ಹೇರಿದರೆ ಅಥವಾ ಪೀಡಿಸಿದರೆ ಅಂತಹ ಮನೆ ಮಾಲೀಕರ ವಿರುದ್ಧ ನಿಯಮಾವಳಿ ಪ್ರಕಾರ ಕ್ರಮ‌ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕರು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸಾಲ ಮರುಪಾವತಿಗೆ ಒತ್ತಾಯಿಸಬಾರದು. ಲಾಕ್‌ಡೌನ್ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡು ಅಥವಾ ವ್ಯಾಪಾರ-ವಹಿವಾಟು ಇಲ್ಲದೆ ಅನೇಕ ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಿಗಳು ಹಾಗೂ ರೈತರು ಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿಗೆ ಒತ್ತಾಯಿಸಬಾರದು. ಒಂದು ವೇಳೆ ಒತ್ತಾಯಿಸುವುದು ಕಂಡುಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.