ADVERTISEMENT

ಮದ್ಯ ಅಕ್ರಮ ಸಾಗಣೆ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 14:20 IST
Last Updated 23 ಡಿಸೆಂಬರ್ 2019, 14:20 IST
ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಸೋಮವಾರ ಬಂಧಿಸಿ, ಮದ್ಯದ ಬಾಟಲಿಗಳು ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ
ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಸೋಮವಾರ ಬಂಧಿಸಿ, ಮದ್ಯದ ಬಾಟಲಿಗಳು ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ   

ಬೆಳಗಾವಿ: ‘ಗೋವಾ ರಾಜ್ಯದಲ್ಲಿ ಮಾರಾಟಕ್ಕೆಂದು ನಮೂದಿಸಿರುವ’ ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ನಿಪ್ಪಾಣಿ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ–4ರ ಸಮೀಪದಲ್ಲಿ ಬಂಧಿಸಿರುವ ಅಬಕಾರಿ ಠಾಣೆ ಪೊಲೀಸರು, 52.250 ಲೀಟರ್ ಮದ್ಯ ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲ್ಲೂಕಿನ ಪಿಲ್ನಿಯ ಲಕ್ಷ್ಮಣ ಬಾಳು ಚವಾಣ (34) ಬಂಧಿತ.

ಅವರು ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ವೈ. ಮಂಜುನಾಥ, ಉಪ ಆಯುಕ್ತ ಬಸವರಾಜ ಸಂದಿಗೌಡ ಮಾರ್ಗದರ್ಶನದಲ್ಲಿ ಚಿಕ್ಕೋಡಿ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ ಜೆ. ಹಿರೇಮಠ, ಅಬಕಾರಿ ಇನ್‌ಸ್ಪೆಕ್ಟರ್‌ ಬಸವರಾಜ ಕರಮಣ್ಣನವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.