ADVERTISEMENT

‘ರಮೇಶ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ’

​ಪ್ರಜಾವಾಣಿ ವಾರ್ತೆ
Published 2 ಜನವರಿ 2019, 14:51 IST
Last Updated 2 ಜನವರಿ 2019, 14:51 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ    

ಗೋಕಾಕ: ‘ಶಾಸಕ ರಮೇಶ ಜಾರಕಿಹೊಳಿ ಅವರ ಬೆಂಬಲದೊಂದಿಗೆ ನಾವು ಆಯ್ಕೆಯಾಗಿದ್ದೇವೆ. ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆಯೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ’ ಎಂದು ನಗರಸಭೆಯ ಸದಸ್ಯರು ತಿಳಿಸಿದ್ದಾರೆ.

ಹೆಸರು ಬಹಿರಂಗ ಪಡಿಸಲು ಇಚ್ಛಿಸದ ನೂತನ ಸದಸ್ಯರು ಹಾಗೂ ಮಹಿಳಾ ಸದಸ್ಯೆಯೊಬ್ಬರ ಪತಿರಾಯರು ಸುದ್ದಿಗಾರರ ಮಾತನಾಡಿ, ‘ನಾವೆಲ್ಲರೂ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇವು. ಶಾಸಕ ರಮೇಶ ಜಾರಕಿಹೊಳಿ ಅವರ ಬೆಂಬಲದೊಂದಿಗೆ ಆಯ್ಕೆಗೊಂಡಿದ್ದೇವೆ. ಅವರ ಜೊತೆಯೇ ಇರುತ್ತೇವೆ’ ಎಂದರು.

‘ರಮೇಶ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೋ, ಇಲ್ಲವೋ ಎನ್ನುವುದು ನಮಗೆ ತಿಳಿದಿಲ್ಲ. ಆದರೆ, ಮಾಧ್ಯಮಗಳ ಮೂಲಕ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನುವುದು ಗೊತ್ತಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.