ಗೋಕಾಕ: ಮೊಬೈಲ್ ಬಳಸಿ ಶಿಕ್ಷಣ ನೀಡುವ ವಿನೂತನ ಕಾರ್ಯಕ್ರಮ ‘ಮಿಸ್ಡ್‌ಕಾಲ್ ಮಾಡಿ ಉತ್ತರ ಪಡೆಯಿರಿ’ ಅಭಿಯಾನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ತಹಶೀಲ್ದಾರ ಡಾ. ಮೋಹನ್ ಭಸ್ಮೆ ಹೇಳಿದರು.
ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಇತ್ತೀಚೆಗೆ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ಮಿಸ್ಡ್‌ಕಾಲ್ ಮಾಡಿ ಉತ್ತರ ಪಡೆಯಿರಿ’ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೀವನದಲ್ಲಿ ಯಾವಾಗ ಏನುಬೇಕಾದರೂ ಆಗಬಹುದು. ಹಾಗೆ ಒಂದು ಮಿಸ್ಡ್‌ಕಾಲ್ ವಿದ್ಯಾರ್ಥಿಗಳ ಜೀವನ ಬದಲಾವಣೆ ಮಾಡಬಹುದು. ಅಭಿಯಾನದ ಸದುಪಯೋಗ ಪಡೆದು ಅಂತಿಮ ಹಂತದ ಪರೀಕ್ಷೆಗೆ ಸಿದ್ಧರಾಗಬೇಕು ಎಂದರು.
ಮಮದಾಪೂರ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಸನದಿ ಚಾಲನೆ ನೀಡಿದರು.
ಡಿವೈಎಸ್ಪಿ ಡಿ.ಎಚ್.ಮುಲ್ಲಾ, ಗೋಕಾಕ ಬಿಇಓ ಜಿ.ಬಿ.ಬಳಗಾರ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಪಿಎಸ್ಐ ಕೆ.ವಾಲಿಕರ, ವಲಯ ಅರಣ್ಯ ಅಧಿಕಾರಿ ಸಂಜೀವ ಸಂಸುದ್ದಿ, ಡಾ. ಮೋಹನ್ ಕಮತ್, ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.