ADVERTISEMENT

ಗೋಕಾಕ: ಮೋದಿ ಜನ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 12:38 IST
Last Updated 17 ಸೆಪ್ಟೆಂಬರ್ 2020, 12:38 IST
ಗೋಕಾಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಗುರುವಾರ ಹಣ್ಣುಗಳನ್ನು ವಿತರಿಸಿದರು
ಗೋಕಾಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಗುರುವಾರ ಹಣ್ಣುಗಳನ್ನು ವಿತರಿಸಿದರು   

ಗೋಕಾಕ: ‘ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಸೇವೆ ಹಾಗೂ ಜಾಗೃತಿ ಕಾರ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ’ ಎಂದು ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು.

ಮೋದಿ ಜನ್ಮದಿನ ಅಂಗವಾಗಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಶಿವಾ ಪ್ರತಿಷ್ಠಾನದ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಿ ಮಾತನಾಡಿದರು.

‘ಪಕ್ಷದಿಂದ 7 ದಿನಗಳವರೆಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಲಾಗುವುದು. ನೈರ್ಮಲ್ಯ ಜಾಗೃತಿ ಮೂಡಿಸಲಾಗುವುದು’ ಎಂದರು.

ADVERTISEMENT

ಮುಖಂಡರಾದ ಭೀಮಗೌಡ ಪೋಲಿಸಗೌಡರ, ಹನಮಂತ ದುರ್ಗನ್ನವರ, ಸುರೇಶ ಸನದಿ, ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.