
ಪ್ರಜಾವಾಣಿ ವಾರ್ತೆ
ಬೀದಿ ನಾಯಿ
(ಸಾಂದರ್ಭಿಕ ಚಿತ್ರ)
ಗೋಕಾಕ: ನಗರಸಭೆ ವ್ಯಾಪ್ತಿಯಲ್ಲಿ ಬರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸಾಗಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಮೈದಾನಗಳು, ಬಸ್ ನಿಲ್ದಾಣಗಳ ಆವರಣದಲ್ಲಿರುವ ನಾಯಿಗಳನ್ನು ಹಿಡಿದು ಆಶ್ರಯ ತಾಣಕ್ಕೆ ಸಾಗಿಸಲು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಸರ್ಕಾರೇತರ ಸಂಸ್ಥೆಗಳು, ಸಂಘ ಸಂಸ್ಥೆಗಳು, ಪ್ರಾಣಿ ದಯಾ ಸಂಘಗಳು ಹಾಗೂ ಇತರೆ ಪ್ರಾಣಿ ಪ್ರಿಯರು, ಪ್ರಾಣಿಗಳ ಸಂರಕ್ಷಣೆ ಸಂಕಲ್ಪ ಹೊಂದಿರುವವರು, ಪ್ರಾಣಿಗಳ ಮೇಲೆ ದಯೆ ಇರುವವರು, ನಾಯಿಗಳ ಆಶ್ರಯ ತಾಣವನ್ನು ದತ್ತು ಪಡೆಯಲು ಅಥವಾ ಆಶ್ರಯ ತಾಣಕ್ಕೆ ಆಹಾರ ಪೂರೈಸಲು ಇಚ್ಛಿಸುವವರಿದ್ದಲ್ಲಿ ನಗರಸಭೆಯ ಆರೋಗ್ಯ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.