ADVERTISEMENT

ಗೋಕಾಕ: ಅರಭಾವಿಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ ಹೃದಯಾಘಾತದಿಂದ ನಿಧನ

ಹೃದಯಾಘಾತದಿಂದ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2023, 18:26 IST
Last Updated 15 ಅಕ್ಟೋಬರ್ 2023, 18:26 IST
<div class="paragraphs"><p>ಸಿದ್ಧಲಿಂಗೇಶ್ವರ ಸ್ವಾಮೀಜಿ </p></div>

ಸಿದ್ಧಲಿಂಗೇಶ್ವರ ಸ್ವಾಮೀಜಿ

   

ಗೋಕಾಕ(ಬೆಳಗಾವಿ ಜಿಲ್ಲೆ): ಸಮೀಪದ ಅರಭಾವಿಮಠ ಗ್ರಾಮದ ದುರದುಂಡೇಶ್ವರ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ(75) ಭಾನುವಾರ ಲಿಂಗೈಕ್ಯರಾದರು.

ರಾತ್ರಿ ಪೂಜೆಗೆ ಸಿದ್ಧತೆ ನಡೆಸಿದ ವೇಳೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಶ್ರೀಗಳು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾಗಿ ವೈದ್ಯರು ತಿಳಿಸಿದರು ಎಂದು ಮಠದ ಮೂಲಗಳು ತಿಳಿಸಿವೆ.

ADVERTISEMENT

ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಲ್ಲಿ ಜನಿಸಿದ ಶ್ರೀಗಳು, 1977ರಲ್ಲಿ ಈ ಮಠದ ಪೀಠ ಅಲಂಕರಿಸಿದ್ದರು. ಅವರ ಪೂರ್ವಾಶ್ರಮದ ತಂದೆಯ ಹೆಸರು ಶಿವಯ್ಯ, ತಾಯಿಯ ಹೆಸರು ಶಿವಮ್ಮ. ಈ ಮಠದ 11ನೇ ಪೀಠಾಧಿಪತಿ ಇವರಾಗಿದ್ದರು ಎಂದು ಮಠದ ಭಕ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.