ADVERTISEMENT

ಬೆಳಗಾವಿ: ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 15:34 IST
Last Updated 4 ಜುಲೈ 2025, 15:34 IST
ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣ
ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣ   

ಬೆಳಗಾವಿ: ಇಲ್ಲಿನ ಅನಗೋಳದ ಭಾಗ್ಯ ನಗರದ ಎರಡನೇ ಕ್ರಾಸ್‌ನಲ್ಲಿರುವ ಇಂಡಿಯನ್‌ ಬ್ಯಾಂಕ್‌ನ ಲಾಕರ್‌ನಲ್ಲಿ ಇರಿಸಿದ್ದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಟಿಳಕವಾಡಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿಯ ಚಂದ್ರಕಾಂತ ಬಾಲಾಜಿ ಜೋರ್ಲಿ(32) ಬಂಧಿತ ಆರೋಪಿ.

ಆತನಿಂದ ಉಂಗುರ, ಸರ, ನೆಕ್‌ಲೇಸ್‌, ಮಂಗಳಸೂತ್ರ ಸೇರಿದಂತೆ ₹14 ಲಕ್ಷ ಮೌಲ್ಯದ 143 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.