ಅಥಣಿ (ಬೆಳಗಾವಿ ಜಿಲ್ಲೆ): ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿಯಿಂದ ಆದಷ್ಟು ಬೇಗನೆ ಸಿಹಿ ಸುದ್ದಿ ಬರಲಿದೆ. ಒಂದು ಸ್ಥಾನಮಾನ ಸಿಗಲಿದೆ’ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
‘ಬಿಜೆಪಿಯಿಂದ ಉಚ್ಚಾಟನೆಗೊಂಡ ಯತ್ನಾಳ ಅವರಿಗೆ ಸಂತೋಷದ ಸುದ್ದಿ ಸಿಗಲಿದ್ದು, ಅವರು ತಮ್ಮ ಮಾತಿನ ಮೇಲೆ ಹಿಡಿತ ಇರಿಸಿಕೊಳ್ಳಬೇಕು ಎಂದು ಮಾಧ್ಯಮಗಳ ಮುಖಾಂತರ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
‘ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಮತ್ತು ಹೆಬ್ಬಾರ ಅವರನ್ನು ಉಚ್ಚಾಟಿಸಿರುವ ಪಕ್ಷದ ತೀರ್ಮಾನವನ್ನು ನಾನು ಸ್ವಾಗತಿಸುವೆ. ಪಕ್ಷಕ್ಕಿಂತ ನಾನು ದೊಡ್ಡವನಲ್ಲ, ವರಿಷ್ಠರು ನಮಗೆ ತುಂಬಾ ಕಿಮ್ಮತ್ತು ಕೊಟ್ಟಿದ್ದಾರೆ. ನಮ್ಮ ಜೊತೆ ಚೆನ್ನಾಗಿದ್ದಾರೆ. ಪಕ್ಷದಲ್ಲಿ ಕೆಲವರಿಗೆ ನೋಟಿಸ್ ನೀಡಲಾಗಿದೆ. ಅವರು ಸದ್ಯಕ್ಕೆ ಬಾಯಿ ಮುಚ್ಚಿಕೊಂಡಿದ್ದಾರೆ. ಪಕ್ಷದ ಚೌಕಟ್ಟು ಬಿಟ್ಟರೆ ಅವರನ್ನು ಕೂಡಾ ಉಚ್ಚಾಟನೆ ಮಾಡುತ್ತಾರೆ’ ಎಂದರು.
‘ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ಎಲ್ಲಿ ಏನು ಹೇಳಬೇಕು ಅದನ್ನು ತಿಳಿಸಲಾಗಿದೆ. ನಾನು ಅವರ ಬಗ್ಗೆ ಬಹಿರಂಗವಾಗಿ ಏನೂ ಮಾತನಾಡಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.