ADVERTISEMENT

ಬೆಳಗಾವಿ: ಹಳಿ‌ ತಪ್ಪಿದ ಗೂಡ್ಸ್ ರೈಲು;ತಪ್ಪಿದ ಅನಾಹುತ, ಸಂಚಾರ ತಾತ್ಕಾಲಿಕ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 4:03 IST
Last Updated 15 ಏಪ್ರಿಲ್ 2025, 4:03 IST
<div class="paragraphs"><p>ಹಳಿ‌ ತಪ್ಪಿದ ಗೂಡ್ಸ್ ರೈಲು</p></div>

ಹಳಿ‌ ತಪ್ಪಿದ ಗೂಡ್ಸ್ ರೈಲು

   

ಬೆಳಗಾವಿ: ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲಿನ‌ ಎರಡು ಬೋಗಿಗಳು ಹಳಿ‌ ತಪ್ಪಿ ಉರುಳಿಬಿದ್ದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಜಿಂದಾಲ್‌ ಕಾರ್ಖಾನೆಗೆ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲು ಬೆಳಗಾವಿ ನಗರ ಹೊರವಲಯದಲ್ಲಿ ಹಳಿ ತಪ್ಪಿತು. ಒಂದು ಹಳಿಯಿಂದ ಇನ್ನೊಂದು ಹಳಿಗೆ ರೈಲನ್ನು ಬದಲಾಯಿಸುವ ಸಂದರ್ಭದಲ್ಲಿ ಈ ವ್ಯತ್ಯಾಸವಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇದರಿಂದ ರೈಲು ಸಂಚಾರದಲ್ಲಿಯೂ ಅಡಚಣೆ ಉಂಟಾಗಿದೆ. ಸುಮಾರು 4 ತಾಸು ದುರಸ್ತಿ ಕಾರ್ಯ ನಡೆಯಲಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ದುರಸ್ತಿ ಕಾರ್ಯ ನಡೆಸುತ್ತಿರುವ ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರು

ಬೆಳಗಾವಿ - ಮಿರಜ್ ಮಾರ್ಗದಲ್ಲಿ ಎಲ್ಲ ರೈಲುಗಳು ಸಂಚಾರ ಸ್ಥಗಿತಗೊಂಡಿದ್ದು , ದುರಸ್ತಿ ಕಾರ್ಯ ಮುಗಿದ ಬಳಿಕ ಆರಂಭಗೊಳ್ಳಲಿವೆ. ಈಗಾಗಲೇ ಮಿರಜ್‌ನಿಂದ ಬರುತ್ತಿದ್ದ ಚಾಲುಕ್ಯ ಶರಾವತಿ ಎಕ್ಸ್‌ಪ್ರೆಸ್, ಎಲ್‌ಟಿಟಿ ದಾದರ್, ಅಜ್ಮೇರ್ ಎಕ್ಸ್‌ಪ್ರೆಸ್‌ ಮಾರ್ಗ ಮಧ್ಯದಲ್ಲಿಯೇ ನಿಂತುಕೊಂಡಿವೆ. ಬೆಳಗಾವಿಯಿಂದ ಹೊರಟಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್, ಬೆಂಗಳೂರು ಜೋದ್ಪುರ್ ಎಕ್ಸ್‌ಪ್ರೆಸ್, ಬೆಂಗಳೂರಿಂದ ಭಗತ್ ಕೋಟಿ, ಕ್ಯಾಸಲ್ ರಾಕ್- ಮಿರಜ್ ಪ್ಯಾಸೆಂಜರ್, ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.