
ಪ್ರಜಾವಾಣಿ ವಾರ್ತೆ
ಬೆಳಗಾವಿ: ವೃಂದ ಮತ್ತು ನೇಮಕಾತಿ ನಿಯಮಗಳನ್ನು ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಿ, ನಿಯಮಿತವಾಗಿ ನೇಮಕ ಪ್ರಕ್ರಿಯೆ ಕೈಗೊಳ್ಳಬೇಕು. ಪ್ರತಿ ವೃಂದದ ಸೇವಾಜ್ಯೇಷ್ಠತೆ ಪಟ್ಟಿ ಸಿದ್ಧಪಡಿಸಿ, ಅರ್ಹರಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿ, ನಗರದಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದವರು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕು. ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನ ನೀಡಬೇಕು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಔಷಧ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಮಲ್ಲಿಕಾರ್ಜುನ ಬಳ್ಳಾರಿ, ಡಾ.ಸಂಜಯ ಸಿದ್ದನ್ನವರ, ಜಗದೀಶ ಗಣಾಚಾರಿ, ಡಾ.ಸಂಜಯ ಡುಮ್ಮಗೋಳ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.