ADVERTISEMENT

ಮೂಡಲಗಿ | ಸಮಾಜದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯಲಿ: ರಾಹುಲ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 3:14 IST
Last Updated 27 ಡಿಸೆಂಬರ್ 2025, 3:14 IST
<div class="paragraphs"><p>ಮೂಡಲಗಿ ತಾಲ್ಲೂಕಿನ ಮುಸಗುಪ್ಪಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಶಾಲೆಗೆ ಭೂದಾನ ಮಾಡಿದ ಕುಟಂಬ ಸದಸ್ಯರಿಗೆ ಸನ್ಮಾನಿಸಲಾಯಿತು</p></div>

ಮೂಡಲಗಿ ತಾಲ್ಲೂಕಿನ ಮುಸಗುಪ್ಪಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಶಾಲೆಗೆ ಭೂದಾನ ಮಾಡಿದ ಕುಟಂಬ ಸದಸ್ಯರಿಗೆ ಸನ್ಮಾನಿಸಲಾಯಿತು

   

ಮೂಡಲಗಿ: ‘ಸಮಾಜದ ಎಲ್ಲ ಜನರಿಗೆ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು. ಸರ್ಕಾರ ಮತ್ತು ಸಮುದಾಯದ ಜನರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳು ಖಂಡಿತವಾಗಿ ಬೆಳೆಯುತ್ತವೆ’ ಎಂದು ಅಪೆಕ್ಸ್ ಬ್ಯಾಂಕ್ ನಿರ್ದೇಶಕ ರಾಹುಲ ಸತೀಶ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಮುಸಗುಪ್ಪಿಯಲ್ಲಿ ಶುಕ್ರವಾರ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

ಶಾಲೆಯ ನವೀಕೃತ ಶಾಲಾ ಕಟ್ಟಡವನ್ನು ಉದ್ಘಾಟಿಸಿದ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ‘ಒಂದು ಮಗು ತನ್ನ ವ್ಯಕ್ತಿತ್ವ ರೂಪಿಸಿಕೊಂಡು ಸಮಾಜದಲ್ಲಿ ಸಾಧನೆ ಮಾಡಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ’ ಎಂದರು.

‘ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದರು. ಪ್ರತಿ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವುದು ಅವರ ಧ್ಯೇಯವಾಗಿದೆ. ಮೂಡಲಗಿ ವಲಯದಲ್ಲಿ 3 ಹೊಸ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು 3 ವರ್ಷಗಳವರೆಗೆ ಅದರ ಎಲ್ಲ ವೆಚ್ಚಗಳನ್ನು ಶಾಸಕರು ವಹಿಸಿಕೊಂಡಿದ್ದಾರೆ. ಅತಿಥಿ ಶಿಕ್ಷಕರ ಗೌರವ ಧನವನ್ನು ಸಹ ತಮ್ಮ ತಮ್ಮ ಹಣದಿಂದ ನಿಭಾಯಿಸಿರುವುದು ರಾಜ್ಯದಲ್ಲಿಯೇ ಮಾದರಿಯಾಗಿದೆ’ ಎಂದರು.

ಸಾಹಿತಿ ಡಾ. ವಿ.ಎಸ್. ಮಾಳಿ, ಮುಖ್ಯ ಅತಿಥಿ ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು ಆರ್.ಎಸ್. ಮಾತನಾಡಿದರು. ಶಾಲೆಗೆ ಭೂದಾನ ಮಾಡಿರುವ ದಿ. ಸಿದ್ದನಗೌಡ ಪಾಟೀಲ ಅವರ ಚಿರಂಜೀವಿ ಬಾಳಗೌಡ ಎಸ್. ಪಾಟೀಲ, ಶಿವಾನಂದ ಪಾಟೀಲ, ರುಕ್ಮವ್ವ ರಾಮಗೌಡ ಪಾಟೀಲ, ಗ್ರಾಮದ ಹಿರಿಯ ವ್ಯಕ್ತಿ ಕಲ್ಲಪ್ಪ ಮಳಲಿ ಅವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಭುಜನ್ನವರ, ಅರಭಾವಿಯ ದುರದುಂಡೀಶ್ವರ ಮಠದ ಗುರುಬಸವಲಿಂಗ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿ, ಬೈಲಹೊಂಗಲದ ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮೀಜಿ ಮಾತನಾಡಿದರು.

ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಅಶೋಕ ಮಲಬನ್ನವರ, ತಾಲ್ಲೂಕು ಪಂಚಾಯಿತಿ ಇಒ ಎಫ್.ಜಿ. ಚಿನ್ನನವರ, ಪಿಡಿಒ ಆರ್.ಎನ್. ಗುಜನಟ್ಟಿ, ಸಾಹಿತಿ ಬಾಲಶೇಖರ ಬಂದಿ, ಶಿಕ್ಷಣ ಸಂಯೋಜಕ ನಾಗರಾಜ ಗಡಾದ, ಶಿಕ್ಷಕರ ಸಂಘದ ಎಂ.ಜಿ. ಮಾವಿನಗಿಡದ, ಚನ್ನಪ್ಪ ಕುಂಬಾರ, ಗೋವಿಂದ ಸಣ್ಣಕ್ಕಿ, ಸಿಆರ್‌ಪಿ ಸಿದ್ರಾಮ್ ದ್ಯಾಗಾನಟ್ಟಿ ಇದ್ದರು. ಸಂಗಮೇಶ ಸೊನ್ನದ ಸ್ವಾಗತಿಸಿದರು.  ಮುಖ್ಯ ಶಿಕ್ಷಕ ಶಂಕರ ಗಾಡವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ ಮಿರ್ಜಿ ನಿರೂಪಿಸಿದರು. ಈಶ್ವರ ಗಾಡವಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.