ADVERTISEMENT

ಕಾಗವಾಡ | ಸರ್ಕಾರದ ಯೋಜನೆ ಫಲಾನುಭವಿಗಳಿಗೆ ತಲುಪಿಸಿ: ಶಾಸಕ ರಾಜು ಕಾಗೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 2:45 IST
Last Updated 28 ಅಕ್ಟೋಬರ್ 2025, 2:45 IST
ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ರಾಜು ಕಾಗೆ ಮಾತನಾಡಿದರು.
ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ರಾಜು ಕಾಗೆ ಮಾತನಾಡಿದರು.   

ಕಾಗವಾಡ: ರಾಜ್ಯ ಸರ್ಕಾರವು ರೈತರು ಹಾಗೂ ಬಡವರಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅರ್ಹ ಪಲಾನುಭವಿಗಳಿಗೆ ಒದಗಿಸುವ ಕೆಲಸ ಮಾಡಬೇಕು ಎಂದು ಶಾಸಕ ರಾಜು ಕಾಗೆ ಸೋಮವಾರ ಹೇಳಿದರು.

ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ 2025-26 ನೇ ಕೆಡಿಪಿ ಸಭೆಯಲ್ಲಿ ಹಲವು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು ಸರ್ಕಾರದ ಯೋಜನೆ ಅರ್ಹ ಬಡ ಜನರಿಗೆ ತಲುಪದೆ ಉಳ್ಳವರ ಪಾಲಗುತ್ತಿದ್ದು ಇದನ್ನು ಅಧಿಕಾರಿಗಳು ಸರಿಪಡಿಸಿ ನೈಜ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು  ಮಾಡಬೇಕು, ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಆಗದಂತೆ ಹೆಚ್ಚಿನ ದಾಸ್ತಾನು ಮಾಡಿ ಅನುಕೂಲ ಮಾಡಬೇಕು ಎಂದರು.

ದ್ರಾಕ್ಷಿ ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡದ ತೋಟಗಾರಿಕೆ ಅಧಿಕಾರಿಗೆ ಸರಿಯಾದ ಮಾಹಿತಿ ಇಲ್ಲದೆ ಸಭೆಗೆ ಯಾಕೆ ಬರುತ್ತಿರಾ ಎಂದು ತರಾಟೆಗೆ ತೆಗೆದುಕೊಂಡರು.

ಕೃಷಿ ಇಲಾಖೆದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ಬಗ್ಗೆ ಗೊಬ್ಬರಗಳು ಬಗ್ಗೆ ವಿಸ್ತಾರವಾದ ಮಾಹಿತಿ ಕೃಷಿ ಅಧಿಕಾರಿ ನಿಂಗಪ್ಪ ಬಿರಾದಾರ್ ನೀಡಿದರು. ತಾಲ್ಲೂಕು ಪಂಚಾಯಿತಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ತಾಲ್ಲೂಕಿನ ಎಂಟು ಗ್ರಾಮ ಪಂಚಾಯಿತಿಗಳ ಪ್ರಗತಿ ಬಗ್ಗೆ ಮತ್ತು ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರ ರವೀಂದ್ರ ಹಾದಿಮನಿ ಕಂದಾಯ ಇಲಾಖೆಯ ಎಲ್ಲಾ ವಿಸ್ತಾರವಾದ ಮಾಹಿತಿ ನೀಡಿದರು.

ಈ ಸಮಯದಲ್ಲಿ ಅಥಣಿ ತಹಶಿಲ್ದಾರ ಸಿದರಾಯ ಬೊಸಗಿ, ರವೀಂದ್ರ ಹಾದಿಮನಿ, ನೀರಾವರಿ ಇಲಾಖೆ ಅಧಿಕಾರಿ ಪ್ರವೀಣ ಹುಣಸಿಕಟ್ಟಿ, ಶಿವಾನಂದ ಕಲ್ಲಾಪೂರ, ಮಲ್ಲಿಕಾರ್ಜುನ ಮಗದುಮ್ಮ, ಬಿಇಒ ಪಾಂಡುರಂಗ ಮದಭಾವಿ, ರಾಕೇಶ ಅರ್ಜುನಾವಾಡ, ಮಹಾಂತೇಶ ಕವಲಾಪೂರ, ಅಶೋಕ ಸತಿಗೌಡರ, ರವೀಂದ್ರ ಮುರಗಾಲಿ ಸೇರಿದಂತೆ ಅನೇಕರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.