ADVERTISEMENT

ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ

ಪರಮಾನಂದವಾಡಿಯ ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 2:41 IST
Last Updated 21 ಫೆಬ್ರುವರಿ 2026, 2:41 IST
ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದಲ್ಲಿ ಶುಕ್ರವಾರ ನಡೆದ ಕರ್ನಾಟಕ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿದ್ದ ಪರಮಾನಂದವಾಡಿಯ ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಮಾತನಾಡಿದರು
ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದಲ್ಲಿ ಶುಕ್ರವಾರ ನಡೆದ ಕರ್ನಾಟಕ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿದ್ದ ಪರಮಾನಂದವಾಡಿಯ ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಮಾತನಾಡಿದರು   

ರಾಯಬಾಗ: ಹಿಂದೆ ಸರ್ಕಾರಿ ಶಾಲೆಗಳ ಬಗ್ಗೆ ಸಮಾಜದಲ್ಲಿ ಕಡಿಮೆ ಗೌರವ ಇತ್ತು. ಆದರೆ ಈಗ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಇಂದಿನ ಸರ್ಕಾರಿ ಶಾಲೆಗಳು ಉತ್ತಮ ಸೌಕರ್ಯ, ಗುಣಮಟ್ಟದ ಶಿಕ್ಷಣ ಹಾಗೂ ತಂತ್ರಜ್ಞಾನ ಆಧಾರಿತ ಅಧ್ಯಯನ ವ್ಯವಸ್ಥೆಗಳೊಂದಿಗೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ ಎಂದು ಪರಮಾನಂದವಾಡಿಯ ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ನಿಡಗುಂದಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶಿಕ್ಷಕರ ಪರಿಶ್ರಮ, ಸರ್ಕಾರದ ಯೋಜನೆಗಳು ಮತ್ತು ಪೋಷಕರ ಜಾಗೃತಿ ಎಲ್ಲವೂ ಸೇರಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರಣವಾಗಿವೆ. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಮಧ್ಯಾಹ್ನ ಊಟ, ಡಿಜಿಟಲ್ ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಗ್ರ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ ಎಂದರು.

ADVERTISEMENT

ಗ್ರಾಮದ ಮುಖಂಡ ಜೀನೇಂದ್ರ ಖೇಮಲಾಪೂರೆ ಮಾತನಾಡಿ, ತಾಯಿಯ ಸ್ಥಾನವನ್ನು ದೇವರಿಗಿಂತ ಮೇಲಾಗಿ ಗುರುತಿಸುವ ನಮ್ಮ ಸಂಸ್ಕೃತಿಯಲ್ಲಿ, ತಾಯಿಯ ಪಾದ ಪೂಜೆ ಮಾಡುವ ಮೂಲಕ ನಮ್ಮೂರಿನ ಶಾಲೆಯ ವಿದ್ಯಾರ್ಥಿಗಳು ಅಪಾರ ಗೌರವ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ತಾಯಂದಿರ ತ್ಯಾಗ, ಮಮತೆ ಮತ್ತು ನಿರಂತರ ಸೇವೆಯನ್ನು ಸ್ಮರಿಸಿ, ಅವರ ಆಶೀರ್ವಾದ ಪಡೆಯುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.

ಎಸ್‌ಡಿಎಂಸಿ ಅಧ್ಯಕ್ಷ ಸಿದ್ರಾಯ ಚೌಗುಲಾ, ಕೆ.ಎಸ್.ಮುತ್ತೆನ್ನವರ, ಜಿನೇಂದ್ರ ಖೇಮಲಾಪೂರೆ, ಪುಟ್ಟಣ್ಣ ಗವಾನಿ, ಸಿದ್ರಾಯ ನಾಯಿಕ, ರಾಜು ಗವಾನಿ, ಬಸಪ್ಪ ಭಜಂತ್ರಿ, ಮಹೇಶ ಕರಿಗಾರ, ಮಹಾಂತೇಶ ಕೆಸರಗೊಪ್ಪ, ಮುತ್ತಪ್ಪ ಕಾಂಬಳೆ, ಲಕ್ಷ್ಮೀ ಹಂಜಿ, ಪ್ರೀತಿ ಕೋಳಿ, ಸುಪ್ರಿಯಾ ಶಿಂಧೆ, ಅನಾರಕಲಿ ಶಿವಾಪುರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.