ADVERTISEMENT

ಸರ್ಕಾರಿ ವಾಹನ ಬಳಸಿದ ಶಾಸಕ ರಾಜು ಕಾಗೆ ಪುತ್ರಿ: ಜಾಲತಾಣದಲ್ಲಿ ಹರಿದಾಡಿದ ವಿಡಿಯೊ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 13:38 IST
Last Updated 28 ಡಿಸೆಂಬರ್ 2025, 13:38 IST
<div class="paragraphs"><p>ಶಾಸಕ ರಾಜು ಕಾಗೆ ಅವರ ಪುತ್ರಿ ತೃಪ್ತಿ ಅವರು, ಚಿಕ್ಕೋಡಿ ಪಟ್ಟಣದಲ್ಲಿ ಸರ್ಕಾರಿ ವಾಹನದಲ್ಲಿ ಓಡಾಡುತ್ತಿರುವುದು</p></div>

ಶಾಸಕ ರಾಜು ಕಾಗೆ ಅವರ ಪುತ್ರಿ ತೃಪ್ತಿ ಅವರು, ಚಿಕ್ಕೋಡಿ ಪಟ್ಟಣದಲ್ಲಿ ಸರ್ಕಾರಿ ವಾಹನದಲ್ಲಿ ಓಡಾಡುತ್ತಿರುವುದು

   

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ಕಾಗವಾಡ ಶಾಸಕರೂ ಆಗಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಎನ್‌ಡಬ್ಲ್ಯುಕೆಆರ್‌ಟಿಸಿ) ಅಧ್ಯಕ್ಷ ರಾಜು(ಭರಮಗೌಡ) ಕಾಗೆ ಅವರ ಪುತ್ರಿ ತೃಪ್ತಿ ಅವರು, ಸರ್ಕಾರಿ ವಾಹನವನ್ನು ಖಾಸಗಿ ಉದ್ದೇಶಕ್ಕೆ ಬಳಸಿದ ವಿಡಿಯೊ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಜು ಕಾಗೆ ಎನ್‌ಡಬ್ಲ್ಯುಕೆಆರ್‌ಟಿಸಿಯವರು ನೀಡಿದ ಕಾರು ಬಳಸಿ, ಚಿಕ್ಕೋಡಿ ಪಟ್ಟಣದಲ್ಲಿ ತೃಪ್ತಿ ಅವರು ಸುತ್ತಾಡುತ್ತಿರುವ ದೃಶ್ಯ ಜಾಲತಾಣದಲ್ಲಿ ಹರಿದಾಡುತ್ತಿವೆ.

ADVERTISEMENT

ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಜು ಕಾಗೆ, ‘ನನ್ನನ್ನು ಕರೆದುಕೊಂಡು ಹೋಗಲು ಚಾಲಕನೊಂದಿಗೆ ಪುತ್ರಿ ಬೆಳಗಾವಿಗೆ ಬರುತ್ತಿದ್ದ ವೇಳೆ ಯಾರೋ ಚಿತ್ರೀಕರಣ ಮಾಡಿದ್ದಾರೆ. ಸರ್ಕಾರಿ ವಾಹನವನ್ನು ಅವಳು ದುರ್ಬಳಕೆ ಮಾಡಿಕೊಂಡಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.