ADVERTISEMENT

‘ಕಿತ್ತೂರು ಕರ್ನಾಟಕ‘ ಘೋಷಣೆ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2021, 14:35 IST
Last Updated 8 ನವೆಂಬರ್ 2021, 14:35 IST
ಮುಂಬೈ ಕರ್ನಾಟಕ ಪ್ರದೇಶವನ್ನು ಕಿತ್ತೂರು ಕರ್ನಾಟಕ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯಲ್ಲಿ ಸಂಸದರಾದ ಈರಣ್ಣ ಕಡಾಡಿ ಹಾಗೂ ಮಂಗಲಾ ಅಂಗಡಿ ಪಾಲ್ಗೊಂಡಿದ್ದರು

ಬೆಳಗಾವಿ: ಮುಂಬೈ ಕರ್ನಾಟಕ ಪ್ರದೇಶವನ್ನು ಕಿತ್ತೂರು ಕರ್ನಾಟಕ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ಸೋಮವಾರ ನಡೆಯಿತು.

ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

‘ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನಡೆದ ಕಿತ್ತೂರು ಉತ್ಸವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ. ಈ ಮೂಲಕ ಇಲ್ಲಿನ ಜನರ ಪ್ರೀತಿಗೆ ಭಾಜನವಾಗಿದ್ದಾರೆ’ ಎಂದು ಸಂಸದರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.