ADVERTISEMENT

‘ನುರಿತ ಕಾರ್ಮಿಕರನ್ನು ಒದಗಿಸಲು ಸಿದ್ಧ’

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 16:07 IST
Last Updated 3 ಜೂನ್ 2020, 16:07 IST

ಬೆಳಗಾವಿ: ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಅಗತ್ಯವಿರುವ ಕಾರ್ಮಿಕರ ಬೇಡಿಕೆ ಸಲ್ಲಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ್ ಉದ್ಯಮಿಗಳನ್ನು ಕೋರಿದ್ದಾರೆ.

‘ಕೋವಿಡ್–19 ಲಾಕ್‌ಡೌನ್‌ ಅವಧಿಯಲ್ಲಿ ಹೆಚ್ಚಿನ ಕೈಗಾರಿಕೆಗಳು ಬಂಡವಾಳ, ಮಾರುಕಟ್ಟೆ ಸಮಸ್ಯೆ ಮತ್ತು ಕಾರ್ಮಿಕರ ಕೊರತೆ ಮೊದಲಾದ ಸಮಸ್ಯೆಗಳನ್ನು ಎದುರಿಸುತ್ತಿವೆ. ಇಲ್ಲಿದ್ದ ಕಾರ್ಮಿಕರು ಅವರವರ ರಾಜ್ಯಗಳಗೆ ವಲಸೆ ಹೋಗಿರುವ ಕಾರಣ ಕಾರ್ಮಿಕರ ಕೊರತೆ ಉಂಟಾಗಿದೆ. ಇದರಿಂದ ಕೈಗಾರಿಕಾ ಅಭಿವೃದ್ಧಿ ಕುಂಠಿತವಾಗಿದೆ. ಇದೇ ವೇಳೆ, ಹೊರರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದ 4ಸಾವಿರ ಕಾರ್ಮಿಕರು ಜಿಲ್ಲೆಗೆ ಮರಳಿದ್ದಾರೆ. ಅವರ ವಿದ್ಯಾರ್ಹತೆ, ಕೌಶಲ, ಅನುಭವ ಇತ್ಯಾದಿ ವಿವರಗಳನ್ನು ಜಿಲ್ಲಾ ಪಂಚಾಯಿತಿಯಿಂದ ಕ್ರೋಢೀಕರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಹೊರ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರಿಗೆ ಉದ್ಯೋಗ ದೊರಕಿಸಿಕೊಡಲು ಮತ್ತು ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಕೈಗಾರಿಕೆಗಳಿಗೆ ಬೇಕಾದ ಕೌಶಲ ಒದಗಿಸಿ, ಕೈಗಾರಿಕೆಗಳಲ್ಲಿ ಉದ್ಯೋಗ ಸಿಗುವಂತ ಮಾಡಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಸೇತುವೆಯಾಗಿ ಕಾರ್ಯನಿರ್ವಹಿಸಲು ಸಿದ್ಧವಿದೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಆಸಕ್ತ ಕೈಗಾರಿಕೋದ್ಯಮಿಗಳು ಹೆಚ್ಚಿನ ಮಾಹಿತಿಗೆ ಮೊ: 9449224464 (ಎಸ್.ಬಿ. ಹುಕ್ಕೇರಿ, ಉಪನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.