ADVERTISEMENT

ಬೇಡಿಕೆ ಈಡೇರಿಕೆಗೆ ಪಂಚಾಯ್ತಿ ನೌಕರರ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 13:36 IST
Last Updated 15 ಜುಲೈ 2021, 13:36 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ (ಸಿಐಟಿಯು)ದವರು ಬೆಳಗಾವಿ ಜಿಲ್ಲಾ ‍ಪಂಚಾಯ್ತಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ (ಸಿಐಟಿಯು)ದವರು ಬೆಳಗಾವಿ ಜಿಲ್ಲಾ ‍ಪಂಚಾಯ್ತಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ (ಸಿಐಟಿಯು)ದವರು ಇಲ್ಲಿನ ಜಿಲ್ಲಾ ‍ಪಂಚಾಯ್ತಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಗ್ರಾ.ಪಂ. ಬಿಲ್‌ ಕಲೆಕ್ಟರ್‌/ಗುಮಾಸ್ತ ಹುದ್ದೆಯಿಂದ ಗ್ರೇಡ್‌–2 ಕಾರ್ಯದರ್ಶಿ/ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗೆ ಆಯ್ಕೆ ಮೂಲಕ ನೇರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಈ ಹಿಂದೆ ಮಾಡಿದ್ದ ನೇಮಕಾತಿ ಆದೇಶವನ್ನು ಒಂದೇ ದಿನದಲ್ಲಿ ಹಿಂಪಡೆದಿರುವುದರಿಂದಾಗಿ 20–25 ವರ್ಷಗಳಿಂದ ಕೆಲಸ ಮಾಡಿದವರಿಗೆ ಅನ್ಯಾಯವಾಗಲಿದೆ. ಅವರು ನಿವೃತ್ತಿಯ ಅಂಚಿನಲ್ಲಿದ್ದಾರೆ. ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘15ನೇ ಹಣಕಾಸು ಯೋಜನೆಯಲ್ಲಿ ವಾಟರ್‌ಮನ್‌/ ಸ್ವೀಪರ್‌ಗಳಿಗೆ ವೇತನ ಪಾವತಿಸುವಂತೆ 2020ರ ನವೆಂಬರ್‌ 25ರಂದು ಸರ್ಕಾರ ಆದೇಶ ಮಾಡಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ. ಸರಾಸರಿ 18–20 ತಿಂಗಳ ವೇತನ ಬಾಕಿ ಇದೆ. ಕೂಡಲೇ ಪಾವತಿಗೆ ಕ್ರಮ ಕೈಗೊಳ್ಳಬೇಕು. ವೃಂದ ಮತ್ತು ನೇಮಕಾತಿ (ಸಿ ಅಂಡ್ ಆರ್‌) ನಿಯಮಗಳಿಗೆ ತಿದ್ದುಪಡಿ ತರುವಾಗ ಗ್ರಾಮ ಪಂಚಾಯ್ತಿಯ ಎಲ್ಲ ಸಿಬ್ಬಂದಿಯನ್ನೂ ಒಳಪಡಿಸಬೇಕು. ಉಳಿದ ಎಲ್ಲ ಸಿಬ್ಬಂದಿಯನ್ನೂ ಇಎಫ್‌ಎಂಎಸ್‌ ವ್ಯವಸ್ಥೆಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ವಿ.ಪಿ. ಕುಲಕರ್ಣಿ ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಎಂ. ಜೈನೆಖಾನ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.