
ಪ್ರಜಾವಾಣಿ ವಾರ್ತೆ
ಬೆಳಗಾವಿ: ಬೆಳೆ ವಿಮೆ (ಫಸಲ್ ಬಿಮಾ) ಯೋಜನೆಯಡಿ 2024ರ ಏಪ್ರಿಲ್‌ನಿಂದ 2025ರ ಮಾರ್ಚ್‌ನಲ್ಲಿ ದ್ರಾಕ್ಷಿ ಬೆಳೆಗೆ ವಿಮೆ ಮಾಡಿಸಿದ್ದ ರೈತರಿಗೆ ಪರಿಹಾರ ವಿತರಣೆ ಆರಂಭವಾಗಿದೆ.
ದ್ರಾಕ್ಷಿಯನ್ನು ರಾಜ್ಯದಲ್ಲಿ 42 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತದೆ. ಮಳೆ, ಹವಾಮಾನ ವೈಪರೀತ್ಯದಿಂದ ಕಳೆದ ವರ್ಷ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು.
31,470 ರೈತರು ಹೆಕ್ಟೇರ್‌ಗೆ ₹14 ಸಾವಿರ ಪ್ರೀಮಿಯಂ ಪಾವತಿಸಿದ್ದರು. 27 ಸಾವಿರ ಹೆಕ್ಟೇರ್ ಪ್ರದೇಶ ವಿಮೆ ಯೋಜನೆಗೆ ಒಳಪಟ್ಟಿತ್ತು. ₹39 ಕೋಟಿ ಪ್ರೀಮಿಯಂ ಪಾವತಿಯಾಗಿತ್ತು. ಆದರೆ, ನವೆಂಬರ್ ಬಂದರೂ ಬೆಳೆಗಾರರಿಗೆ ಪರಿಹಾರ ಪಾವತಿ ಆಗಿರಲಿಲ್ಲ. ಇದರ ಕುರಿತು ನವೆಂಬರ್ 1ರ ‘ಪ್ರಜಾವಾಣಿ’ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.