ADVERTISEMENT

ಗೃಹಲಕ್ಷ್ಮಿ: ವಿಪಕ್ಷಗಳಿಗೆ ಅತ್ತೆ–ಸೊಸೆ ಉತ್ತರ ನೀಡಿದ್ದಾರೆ; ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2024, 11:01 IST
Last Updated 15 ಡಿಸೆಂಬರ್ 2024, 11:01 IST
<div class="paragraphs"><p>ಲಕ್ಷ್ಮಿ ಹೆಬ್ಬಾಳಕರ</p></div>

ಲಕ್ಷ್ಮಿ ಹೆಬ್ಬಾಳಕರ

   

ಬೆಳಗಾವಿ: ‘ಗೃಹಲಕ್ಷ್ಮಿ ಯೋಜನೆ ಮೂಲಕ ಸರ್ಕಾರವು ಅತ್ತೆ-ಸೊಸೆ ಮಧ್ಯೆ ಜಗಳ ತಂದಿಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷದವರಿಗೆ, ಗದುಗಿನಲ್ಲಿ ಅತ್ತೆ-ಸೊಸೆ ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಕೊಳವೆಬಾವಿ ಕೊರೆಯಿಸುವ ಮೂಲಕ ಉತ್ತರ ನೀಡಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅತ್ತೆ–ಸೊಸೆ ಮಾಡಿದ ಕಾರ್ಯ ನೋಡಿ ಖುಷಿಯಾಯಿತು. ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಕೊಳವೆಬಾವಿ ಕೊರೆಯಿಸಿ, ಅವರಿಬ್ಬರೂ ಮಾದರಿಯಾಗಿದ್ದಾರೆ. ಆ ಕೊಳವೆಬಾವಿಯ ನೀರು ಬಳಸಿಕೊಂಡು ವ್ಯವಸಾಯ ಮಾಡುತ್ತಿದ್ದಾರೆ’ ಎಂದರು.

ADVERTISEMENT

‘ಬೆಳಗಾವಿಯಲ್ಲಿ ಡಿ.26, 27ರಂದು ನಡೆಯಲಿರುವ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವವು ಐತಿಹಾಸಿಕ ಕಾರ್ಯಕ್ರಮವಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.