ADVERTISEMENT

ಸಮೂಹ ನೃತ್ಯ: ಕೊಳವಿ ಶಾಲೆ ಪ್ರಥಮ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 10:09 IST
Last Updated 24 ಫೆಬ್ರುವರಿ 2020, 10:09 IST
ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಗೋಕಾಕ ತಾಲ್ಲೂಕು ಕೊಳವಿಯ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಗಣ್ಯರು ಬಹುಮಾನ ಹಾಗೂ ಪ್ರಶಸ್ತಿಪತ್ರ ವಿತರಿಸಿದರು
ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಗೋಕಾಕ ತಾಲ್ಲೂಕು ಕೊಳವಿಯ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಗಣ್ಯರು ಬಹುಮಾನ ಹಾಗೂ ಪ್ರಶಸ್ತಿಪತ್ರ ವಿತರಿಸಿದರು   

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯಿಂದ ‘ವಾರಾಂತ್ಯ ಕಾರ್ಯಕ್ರಮ’ದಲ್ಲಿ ಹುಕ್ಕೇರಿ ತಾಲ್ಲೂಕು ಯರಗಟ್ಟಿಯ ಬಸವೇಶ್ವರ ಜಾತ್ರೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಂತರ ಶಾಲಾ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಗೋಕಾಕ ತಾಲ್ಲೂಕಿನ ಕೊಳವಿಯ ಸರ್ಕಾರಿ ಪ್ರಾಥಮಿಕ ಶಾಲಾ ತಂಡದವರು ಪ್ರಥಮ ಬಹುಮಾನ ಗೆದ್ದರು.

ಜಿಲ್ಲೆಯ ವಿವಿಧ 10 ಶಾಲಾ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು, ದ್ವಿತೀಯ ಬಹುಮಾನವನ್ನು ಹೊಸೂರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕೊಳವಿಯ ಸರ್ಕಾರಿ ಪ್ರಾಥಮಿಕ ಶಾಲಾ ತಂಡ, ತೃತೀಯ ಬಹುಮಾನವನ್ನು ಯರಗಟ್ಟಿಯ ಕರ್ನಾಟಕ ಪಬ್ಲಿಕ ಶಾಲೆ ಮತ್ತು ಹೊಸೂರದ ಸರ್ಕಾರಿ ಪ್ರೌಢಶಾಲೆ ತಂಡಗಳು (ಜಂಟಿಯಾಗಿ) ಪಡೆದುಕೊಂಡವು. ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ ₹ 3ಸಾವಿರ, ದ್ವಿತೀಯ ₹ 2 ಸಾವಿರ ಹಾಗೂ ₹ 1ಸಾವಿರ ಬಹುಮಾನ ನೀಡಲಾಯಿತು.

ಯರಗಟ್ಟಿಯ ಹಿರಿಯರಾದ ಬಿ.ಆರ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಮುಖಂಡರಾದ ಹುಸೇನ ಮುಲ್ಲಾ, ವಿರೂಪಾಕ್ಷಿ ಚೌಗಲಾ, ಚಂದ್ರಶೇಖರ ಪಾಟೀಲ, ಮಲ್ಲಿಕಾರ್ಜುನ ನಂದಗಾವಿ, ಕಿರಣ ಚೌಗಲಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.