
ಬೆಳಗಾವಿ: ‘ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಶನಿವಾರದೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಭಾನುವಾರ ಹೇಳಿದರು.
ಮೃತರ ಖಾತೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿ ಸಿದ ಅವರು, ‘ಮೃತರ ಖಾತೆಗೆ ಹಣ ಜಮೆ ಆಗುವುದು ತಿಳಿದಿಲ್ಲ. ಅಂಗನವಾಡಿ ಕಾರ್ಯಕರ್ತೆಯರು ಪರಿಶೀಲಿಸುವರು. ಮೃತರ ಖಾತೆಗೆ ಜಮೆ ಆಗಿದ್ದರೆ ರಿಕವರಿ ಮಾಡುವ ಕುರಿತು ಬ್ಯಾಂಕ್‌ಗಳಿಗೆ ಸೂಚನೆ ಕೊಟ್ಟಿದ್ದೇವೆ’ ಎಂದರು.
ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಸಿಎಂ ಚರ್ಚೆ: ‘ಆಡಳಿತ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕಿದೆ. ಮುಖ್ಯಮಂತ್ರಿ ಅವರು ಈ ಬಗ್ಗೆ ಚರ್ಚೆ ನಡೆಸಿದರು. ಎರಡು ಅಥವಾ ಮೂರು ಜಿಲ್ಲೆ ರಚನೆಗೆ ಯೋಜಿಸಿದ್ದರು. ಬೇರೆ ತಾಲ್ಲೂಕುಗಳನ್ನು ಜಿಲ್ಲೆಯಾಗಿ ಘೋಷಿಸಲು ಕೋರಿ ಹಲವರು ನಿಯೋಗ ತಂದರು. ಈ ಕುರಿತು ಚಿಂತಿಸಿ ತೀರ್ಮಾನ ಕೈಗೊಳ್ಳಬೇಕಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.