ರಾಮದುರ್ಗ: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಗೆ ಜನರಿಗೆ ಮೂಲ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ನೀಡಿ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ವಿಧಾನ ಸಭೆಯ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಬುಧವಾರ ಲೋಕೊಪಯೋಗಿ ಇಲಾಖೆಯ 5054 ಶಿರ್ಷಿಕೆಯಡಿ ₹3.50 ಕೋಟಿ ಅನುದಾನದಲ್ಲಿ ತಾಲ್ಲೂಕಿನ ಹಲಗತ್ತಿ ಕ್ರಾಸ್‌ದಿಂದ ಇಡಗಲ್-ಹಿರೇಮೂಲಂಗಿ ರಸ್ತೆ ಸುಧಾರಣೆ ಮತ್ತು ₹1 ಕೋಟಿ ಅನುದಾನದಲ್ಲಿ ಸಾಲಹಳ್ಳಿ, ಬಿಜಗುಪ್ಪಿ, ಚಿಪ್ಪಲಕಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲ್ಲೂಕಿನ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಸರ್ಕಾರದಿಂದ ಮತ್ತಷ್ಟು ಅನುದಾನ ಬಿಡುಗಡೆಗೊಳಿಸುವ ಮುಖಾಂತರ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಇಡಗಲ್ ಪಂಚಾಯಿತಿ ಮಾಜಿ ಅಧ್ಯಕ್ಷ ಫಕೀರಪ್ಪ ಕೊಳಚಿ, ಫೀರು ತಳವಾರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ. ರವಿಕುಮಾರ, ಎಂಜಿನಿಯರ್ ದೇವರಡ್ಡಿ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.