ADVERTISEMENT

ಸಂಪುಟ ‍ಪುನರ್‌ರಚನೆ ಕುರಿತು ವರಿಷ್ಠರೇ ತೀರ್ಮಾನಿಸುವರು: ಸಚಿವ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 18:02 IST
Last Updated 27 ಡಿಸೆಂಬರ್ 2025, 18:02 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯಾವುದನ್ನೂ ಪರಿಷ್ಕರಿಸುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ಸಂಪುಟ ‍ಪುನರ್‌ರಚನೆ ಮತ್ತು ಪಕ್ಷದ ಅಧ್ಯಕ್ಷ ಸ್ಥಾನ ಕುರಿತು ವರಿಷ್ಠರೇ ತೀರ್ಮಾನಿಸುವರು. ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸರ್ಕಾರವೇ ನಿರ್ಧರಿಸಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಕಲ್ಯಾಣ ಕರ್ನಾಟಕದ ಜನರು ಸವಲತ್ತು, ಅನುದಾನ ಪಡೆಯಲು 40 ವರ್ಷ ಹೋರಾಟ ನಡೆಸಿದರು. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಸದ್ಯ ಅನುದಾನ ನೀಡಲಿಕ್ಕಿಲ್ಲ, ವಿಳಂಬವಾಗಬಹುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.