ADVERTISEMENT

ಸೇವಾ ಭದ್ರತೆ: ಉನ್ನತ ಶಿಕ್ಷಣ ಸಚಿವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 12:23 IST
Last Updated 13 ಅಕ್ಟೋಬರ್ 2021, 12:23 IST
ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಘಟನೆಗಳ ಒಕ್ಕೂಟದವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಬೆಳಗಾವಿಯಲ್ಲಿ ಬುಧವಾರ ಮನವಿ ಸಲ್ಲಿಸಿದರು
ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಘಟನೆಗಳ ಒಕ್ಕೂಟದವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಬೆಳಗಾವಿಯಲ್ಲಿ ಬುಧವಾರ ಮನವಿ ಸಲ್ಲಿಸಿದರು   

ಬೆಳಗಾವಿ: ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಘಟನೆಗಳ ಒಕ್ಕೂಟದವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಇಲ್ಲಿ ಬುಧವಾರ ಮನವಿ ಸಲ್ಲಿಸಿದರು.

ಪ್ರತಿಕ್ರಿಯಿಸಿದ ಸಚಿವರು, ‘ಅತಿಥಿ ಉಪನ್ಯಾಸಕರನ್ನು ಮುಂದುವರಿಸಲು ಶೀಘ್ರವೇ ಕ್ರಮ ವಹಿಸಲಾಗುವುದು. ವೇತನ ಹೆಚ್ಚಿಸಲಾಗುವುದು’ ಎಂದು ಭರವಸೆ ನೀಡಿದರು.

‘ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಸಾಧ್ಯವಿಲ್ಲ. ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾಭದ್ರತೆ ಒದಗಿಸುವ ಕುರಿತು ಯೋಜಿಸುತ್ತಿದ್ದೇವೆ’ ಎಂದು ತಿಳಿಸಿದರು.

ADVERTISEMENT

ವಿಧಾನಪರಿಷತ್‌ ಸದಸ್ಯರಾದ ಅರುಣ ಶಹಾಪೂರ, ಹಣಮಂತ ನಿರಾಣಿ ಹಾಗೂ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಅತಿಥಿ ಉಪನ್ಯಾಸಕರಾದ ಶಿವಾನಂದ ಕಲ್ಲೂರ, ನಂದೀಶ ಕರಾಳೆ, ರಾಜು ಕಂಬಾರ, ಲಕ್ಷ್ಮಣ ಸನದಿ, ಎನ್.ಬಿ. ಕೊಪ್ಪದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.