ADVERTISEMENT

ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 12:45 IST
Last Updated 13 ಫೆಬ್ರುವರಿ 2021, 12:45 IST
ಬೆಳಗಾವಿಯ ಎಸ್‌ಕೆಇ ಸಂಸ್ಥೆಯ ಜಿ.ಎಸ್‌.ಎಸ್. ಕಾಲೇಜಿನಲ್ಲಿ 2020–21ನೇ ಸಾಲಿನ ಜಿಮ್ಖಾನಾ ವಿದ್ಯಾರ್ಥಿ ಒಕ್ಕೂಟವನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಉದ್ಘಾಟಿಸಿದರು
ಬೆಳಗಾವಿಯ ಎಸ್‌ಕೆಇ ಸಂಸ್ಥೆಯ ಜಿ.ಎಸ್‌.ಎಸ್. ಕಾಲೇಜಿನಲ್ಲಿ 2020–21ನೇ ಸಾಲಿನ ಜಿಮ್ಖಾನಾ ವಿದ್ಯಾರ್ಥಿ ಒಕ್ಕೂಟವನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಉದ್ಘಾಟಿಸಿದರು   

ಬೆಳಗಾವಿ: ‘ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾವನಾತ್ಮಕ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು. ಅವರು ಚೆನ್ನಾಗಿ ಕಲಿತು, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು ಮತ್ತು ಪ್ರೋತ್ಸಾಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ನಗರದ ಎಸ್‌ಕೆಇ ಸಂಸ್ಥೆಯ ಜಿ.ಎಸ್‌.ಎಸ್. ಕಾಲೇಜಿನಲ್ಲಿ 2020–21ನೇ ಸಾಲಿನ ಜಿಮ್ಖಾನಾ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಧನಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಪಠ್ಯದೊಂದಿಗೆ ಕ್ರೀಡೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ನಾಗರಿಕ ಸೇವಾ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ ಇದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಪ್ಪುಗಳನ್ನು ಮಾಡಲು ಸಿದ್ಧವಿರಬೇಕು ಮತ್ತು ಅನುಭವದ ಮೂಲಕ ಉತ್ತಮ ತೀರ್ಮಾನವನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಎಸ್‌ಕೆಇ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಆರ್.ಡಿ. ಶಾನಬಾಗ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ.ಎನ್.ಡಿ. ಹೆಗಡೆ ಸ್ವಾಗತಿಸಿದರು. ಒಕ್ಕೂಟದ ಉಪಾಧ್ಯಕ್ಷ ಎ.ಎ. ಹಲಗೇಕರ ವರದಿ ಮಂಡಿಸಿದರು. ವಿದ್ಯಾರ್ಥಿ ಪ್ರತಿನಿಧಿ ಪ್ರಗತಿ ಯಾಮೊಜಿ ಅತಿಥಿಗಳನ್ನು ಪರಿಚಯಿಸಿದರು. ಸ್ನೇಹಾ ಮತ್ತು ಐಶ್ವರ್ಯಾ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ವೈಶಾಲಿ ಸಾಳುಂಕೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.