ADVERTISEMENT

ನಮಗೂ ಗುರುತಿನ ಚೀಟಿ ನೀಡಿ: ಹಕ್ಕಿಪಿಕ್ಕಿಗರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 23:45 IST
Last Updated 18 ಡಿಸೆಂಬರ್ 2025, 23:45 IST
ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಹಕ್ಕಿ–ಪಿಕ್ಕಿ ಸಮುದಾಯದವರು ಗುರುವಾರ ನೃತ್ಯ ಮಾಡಿ ವಿನೂತನವಾಗಿ ಪ್ರತಿಭಟಿಸಿದರು –ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಹಕ್ಕಿ–ಪಿಕ್ಕಿ ಸಮುದಾಯದವರು ಗುರುವಾರ ನೃತ್ಯ ಮಾಡಿ ವಿನೂತನವಾಗಿ ಪ್ರತಿಭಟಿಸಿದರು –ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ   

ಬೆಳಗಾವಿ: ‘ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್‌ ಸೇರಿ ನಾಗರಿಕರಿಗೆ ಬೇಕಾದ ಅಗತ್ಯ ದಾಖಲೆಗಳನ್ನು ನಮಗೂ ನೀಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಂಯೋಜಕ) ನೇತೃತ್ವದಲ್ಲಿ ಹಕ್ಕಿಪಿಕ್ಕಿ ಸಮುದಾಯದವರು ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ವೇದಿಕೆಯಲ್ಲಿ ಗುರುವಾರ ಸಾಂಪ್ರದಾಯಿಕ ದಿರಿಸಿನಲ್ಲೇ ನೃತ್ಯ ಮಾಡಿ, ವಿನೂತನವಾಗಿ ಪ್ರತಿಭಟಿಸಿದರು.

‘ಖಾನಾಪುರ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ನಾವು ಗಡ್ಡೆಗೆಣಸು ತಿಂದು ಬದುಕು ಸಾಗಿಸುತ್ತಿದ್ದೇವೆ. ಸರ್ಕಾರದಿಂದ ನಮಗೆ ಯಾವ ಸೌಲಭ್ಯವೂ ಸಿಕ್ಕಿಲ್ಲ. ಮುಖ್ಯವಾಗಿ ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್‌, ಜಾತಿ ಪ್ರಮಾಣ ಪತ್ರ ಕೊಟ್ಟಿಲ್ಲ. ಹಲವು ವರ್ಷಗಳಿಂದ ಹೋರಾಟ ಮಾಡಿದರೂ ನ್ಯಾಯ ಸಿಕ್ಕಿಲ್ಲ. ಸರ್ಕಾರ ವಿಶೇಷ ಪ್ರಕರಣ ಎಂದು ಪರಿಗಣಿಸಿ ನ್ಯಾಯ ಕೊಡಬೇಕು’ ಎಂದು ಅವರು ಒತ್ತಾಯಿಸಿದರು‌.

‘ಈ ಹಿಂದೆ ಡಿವೈಎಸ್‌ಪಿ ಮೂಲಕ ಸ್ಥಳೀಯ ಠಾಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತಿತ್ತು. ಈಗ ಅದೇ ರೀತಿ ಪ್ರಕ್ರಿಯೆ ಮುಂದುವರಿಸಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

ಮುಖಂಡರಾದ ಎನ್‌.ಶಂಕರ, ವಿಠ್ಠಲ ಸಗರಮನ್ನವರ, ದುರ್ಗಪ್ಪ ದಂಡಿನ್ನವರ, ರಾಜಶೇಖರ ಹಿಂಡಲಗಿ, ರಾಘವೇಂದ್ರ ಛಲವಾದಿ, ಸಂಗೀತಾ ಕದಂ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಆಧಾರ್‌ ಕಾರ್ಡ್‌ ರೇಷನ್‌ ಕಾರ್ಡ್‌ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಹಕ್ಕಿ–ಪಿಕ್ಕಿ ಸಮುದಾಯದವರು ಗುರುವಾರ ಸಾಂಪ್ರದಾಯಿಕ ದಿರಿಸಿನಲ್ಲಿ ಬಂದು ಪ್ರತಿಭಟಿಸಿದರು  ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.