ADVERTISEMENT

ಹಣಬರ ಸಮಾಜ ಮುಖ್ಯವಾಹಿನಿಗೆ ಬರಬೇಕಿದೆ: ಶಾಸಕ ಬಾಲಚಂದ್ರ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 6:26 IST
Last Updated 29 ಆಗಸ್ಟ್ 2024, 6:26 IST
ಗೋಕಾಕದಲ್ಲಿ  ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಹಣಬರ ಸಮಾಜ ಬುಧವಾರ ಏರ್ಪಡಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು
ಗೋಕಾಕದಲ್ಲಿ  ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಹಣಬರ ಸಮಾಜ ಬುಧವಾರ ಏರ್ಪಡಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು   

ಗೋಕಾಕ: ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಬುಧವಾರ ಇಲ್ಲಿನ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಜಂಟಿಯಾಗಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜಕ್ಕೆ ಅಗತ್ಯವಿರುವ ಎಲ್ಲ ಬಗೆಯ ನೆರವನ್ನು ನೀಡಲು ಸಿದ್ಧ. ಸಮಾಜದ ಬದಲಾವಣೆಯಲ್ಲಿ ಶಿಕ್ಷಣವೊಂದೇ ಪ್ರಮುಖ ಅಸ್ತ್ರವಾಗಿದೆ ಎಂದು ತಿಳಿಸಿದರು.

ADVERTISEMENT

‘ಹಣಬರ ಸಮಾಜವು ನಮ್ಮ ಭಾಗದಲ್ಲಿ ಕಡಿಮೆ ಜನಸಂಖ್ಯೆಯನ್ನು ಹೊಂದಿದ್ದು, ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಮಾಜವು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಬೇಕಿದ್ದು, ಸಮಾಜದ ಅಶೋತ್ತರಗಳನ್ನು ಈಡೇರಿಸಲು ನಮ್ಮ ಕುಟುಂಬ ಸಿದ್ಧವಿದೆ’ ಎಂದು ತಿಳಿಸಿದರು.

ಈಗಾಗಲೇ ಬಹುತೇಕ ಸಮಾಜಗಳ ಸಮಾವೇಶಗಳನ್ನು ಸಂಘಟಿಸುವ ಮೂಲಕ ಸಮಾಜಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಜಾತಿಗಳನ್ನು ಸಂಘಟಿಸಿ ಅವರಲ್ಲಿ ಒಗ್ಗಟ್ಟು, ಸಾಮರಸ್ಯ ತರುವ ಮೂಲಕ ಒಗ್ಗಟ್ಟಿನ ಮಂತ್ರಗಳನ್ನು ಜಪಿಸುತ್ತಿದ್ದೇವೆ. 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಪ್ರತಿಪಾದಿಸಿದ ಸಾಮಾಜಿಕ ನ್ಯಾಯದ ಅನುಭವ ಮಂಟಪದ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪ್ರತಿ ಸಮಾಜಕ್ಕೂ ಅಧಿಕಾರ ಕಲ್ಪಿಸುವ ಮೂಲಕ ಅವರ ಪ್ರಗತಿಗೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದರು.

ಜಯಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಚಿತ್ರದುರ್ಗದ ಹಣಬರ ಮಠದ ಯಾದವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಪ್ರಭಾ ಶುಗರ್ ನಿರ್ದೇಶಕ ಶಿವಲಿಂಗ ಪೂಜೇರಿ, ಸಿದ್ದನಗೌಡ ಪಾಟೀಲ, ಬಿ.ಎಲ್.ಪಾಟೀಲ, ಅರವಿಂದ ತೇಣಗಿ, ಶೀತಲ ಮುಂಡೆ, ಮಂಜುನಾಥ ಪಾಟೀಲ, ಕಸಾಪ ಅಧ್ಯಕ್ಷ ಡಾ. ಸಂಜಯ ಸಿಂಧಿಹಟ್ಟಿ, ಆನಂದ ಸೊಂಟಲಕ್ಕಪ್ಪನವರ ಸೇರಿದಂತೆ ಸಮಾಜ ಬಾಂಧವರು ಉಪಸ್ಥಿತರಿದ್ದರು.

ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಹಣಬರ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸತ್ಕರಿಸಿ, ಪ್ರೋತ್ಸಾಹಿಸಲಾಯಿತು.

ಇದಕ್ಕೂ ಮುನ್ನ ನಡೆದ ಕುಂಭಮೇಳಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಪ್ರತಿಯೊಂದು ಸಮಾಜಕ್ಕೂ ಅಧಿಕಾರ ನೀಡಿಕೆ ಎಲ್ಲ ಜಾತಿಗಳನ್ನು ಒಗ್ಗೂಡಿಸುವ ಕಾರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.