ಸತ್ತಿಗೇರಿ: ‘ಯುಪಿಎಸ್‌ಸಿ ಪರೀಕ್ಷೆ ಟಾಪರ್, ಕೊಡ್ಲಿವಾಡದ ಹನುಮಂತ ನಂದಿ ನಮ್ಮೆಲ್ಲರ ಹೆಮ್ಮೆ’ ಎಂದು ಪ್ರಾಧ್ಯಾಪಕ ರಾಜಶೇಖರ ಬಿರಾದಾರ ಹೇಳಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಅಭಿಪ್ರೇರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆರಂಭಿಕ ಸೋಲುಗಳಿಗೆ ಹೆದರದ ಹನುಮಂತ ಈಗ ರೈಲ್ವೆ ಇಲಾಖೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಅವರ ಜೀವನ ಮತ್ತು ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು’ ಎಂದರು.
ಹನುಮಂತ ನಂದಿ ಅವರು, ತಾವು ಯುಪಿಎಸ್‌ಸಿ ಪರೀಕ್ಷೆಗೆ ನಡೆಸಿದ ಸಿದ್ಧತೆ ಕುರಿತು ವಿವರಿಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಂಯಮದಿಂದ ಉತ್ತರಿಸಿದರು. ಶಿಕ್ಷಣ ಸಂಯೋಜಕ ಶ್ರೀಕಾಂತ ಕರಲಿಂಗಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಚಾರ್ಯ ನಾಗರಾಜು ಕೆ. ಅಧ್ಯಕ್ಷತೆ ವಹಿಸಿದ್ದರು. ಈರಣ್ಣ ಹೊಸಮನಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.